ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ತಹಸೀಲ್ದಾರ್ ವಾಹನದ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿಜೇತ್ ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ತಹಸೀಲ್ದಾರ್ ವಾಹನದ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಹೆಗ್ತುರು ವಿಜೇತ್ (26) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮೃತ ವ್ಯಕ್ತಿ.

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆ ಗಮನಿಸಿದಾಗ ದೊಡ್ಡವರ ದುರಾಸೆಗೆ ಅಮಾಯಕನ ಬಲಿಯಾಯ್ತೆ ಎಂಬ ಅನುಮಾನ ಕಾಡುತ್ತಿದೆ.



ಮನೆಯ ಸಮೀಪದಲ್ಲಿರುವ ಅಡಿಕೆ ತೋಟದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳೇನು ಎಂದು ತಿಳಿದಿಲ್ಲ. ಮೃತನನ್ನು ಶೃಂಗೇರಿಯ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಯವಕ ವಿಜೇತ್ ಎಲ್ಲರಿಗೂ ಅಚ್ಚುಮೆಚ್ಚಾಗಿದ್ದ,ಬಹಳ ಸೌಮ್ಯ ಸ್ವಭಾವದ ಯುವಕನಾಗಿದ್ದು, ಸ್ನೇಹಜೀವಿಯಾಗಿದ್ದರು. ಒಟ್ಟಿನಲ್ಲಿ ಭ್ರಷ್ಟ ಅಧಿಕಾರಿಗಳು, ರಾಜಕಾರಣಿಗಳ ಷಡ್ಯಂತ್ರಕ್ಕೆ ಶೃಂಗೇರಿಯ ಅಮಾಯಕನೊಬ್ಬನ ಬಲಿಯಾಗಿದೆ.