ಅಜ್ಜಂಪುರ : (ನ್ಯೂಸ್ ಮಲ್ನಾಡ್ ವರದಿ) ಮನೆ ದರೋಡೆ ಮಾಡಿದ್ದ ಖದೀಮನನ್ನು ಕಾರ್ಯಾಚರಣೆಯ ಮೂಲಕ ಪೊಲೀಸರು ಬಂಧಿಸಿ ಆತನ ಬಳಿಯಿದ್ದ ಹಣ ಹಾಗೂ ಚಿನ್ನಾಭರಣವನ್ನು ವಶ ಪಡೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಮಲ್ಲೇನಹಳ್ಳಿಯ ನಿವಾಸಿ ಸುರೇಶ್ ಎಂಬುವವರ ಮನೆಗೆ ಈ ಹಿಂದೆ ನುಗ್ಗಿ ಹಣ ಹಾಗೂ ಚಿನ್ನಾಭರಣವನ್ನು ಲಪಟಾಯಿಸಿದ್ದ ಖತರ್ನಾಕ್ ಕಳ್ಳನನ್ನು ಅಜ್ಜಂಪುರ ಪೊಲೀಸರು ಕಾರ್ಯಾಚರಣೆ ನಡೆಸುವ ಮೂಲಕ ಬಂಧಿಸಿದ್ದಾರೆ. ಬಂಧಿತನನ್ನು ಕೊರಚರಹಟ್ಟಿ ನಿವಾಸಿ ಪ್ರವೀಣ ಎಂದು ಗುರುತಿಸಲಾಗಿದೆ. ಬಂಧಿತನಿಂದ ಹಣ ಚಿನ್ನಾಭರಣ ಹಾಗೂ ಒಂದು ಬೈಕ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ : ಶೃಂಗೇರಿ ತಾಲೂಕು ಕಛೇರಿಯಲ್ಲಿ ಕಡತ ಕಳ್ಳರ ಕರಾಮತ್ತು : ತಿಜೋರಿ ತೆಗೆದ ಚಾಲಾಕಿಗಳು ಬೀಳುವರೇ ಖಾಕಿ ಬಲೆಗೆ
ಈ ಕಾರ್ಯಾಚರಣೆಯನ್ನು ಅಪರಾಧ ಪತ್ತೆದಳ ವಿಭಾಗದ ಠಾಣಾಧಿಕಾರಿ ಮಂಜುಳಾಬಾಯಿ ನೇತೃತ್ವದ ತಂಡ ನಡೆಸಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಆರೋಪಿಯನ್ನು ಪತ್ತೆ ಮಾಡಿದ ಸಿಬ್ಬಂದಿಗಳಿಗೆ ಬಹುಮಾನ ವಿತರಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

0 Comments