ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ನಡೆಸಲು ಸಿದ್ಧಪಡಿಸಿದ್ದ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಕನ್ನೇಹಳ್ಳಿ ಗ್ರಾಮದ ಸರ್ವೇ ನಂಬರ್ 119 ರಲ್ಲಿ ಬರುವ ಕಾಫಿ ತೋಟದಲ್ಲಿ ಕೆರೆ ನಿರ್ಮಾಣ ಮಾಡುವ ಸಲುವಾಗಿ ಮರಗಳನ್ನು ಕಡಿಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯದೆ ಅಕ್ರಮವಾಗಿ ಮರಗಳನ್ನು ಕಡಿಯಲಾಗಿದೆ.
ಇದನ್ನೂ ಓದಿ :
ಮಲೆನಾಡಿನಲ್ಲಿ ಭೀಕರ ರಸ್ತೆ ಅಪಘಾತ; ಇಬ್ಬರ ದುರ್ಮರಣ
ಬುಡ ಸಮೇತ ಕತ್ತರಿಸಿದ ಮರಗಳನ್ನು ನಾಟ ಮಾಡಿ ಒಂದೆಡೆ ಕೂಡಿಡಲಾಗಿತ್ತು ಈ ಕುರಿತು ಖಚಿತ ಮಾಹಿತಿಯನ್ನು ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮರದ ನಾಟಗಳನ್ನು ವಶಕ್ಕೆ ಪಡೆದಿದ್ದಾರೆ ಹಾಗೂ ತೋಟದ ಮಾಲೀಕ ಮತ್ತು ಮ್ಯಾನೇಜರ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ದಾಳಿಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಕೆ ಸತೀಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಯೇಶ್, ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ನಂದೀಶ್,ವೆಂಕಟೇಶ್, ನಾರಾಯಣ್,ಹೇಮಂತ್, ಕುಮಾರಸ್ವಾಮಿ ಹಾಗೂ ಇನ್ನಿತರ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ತನು ಕೊಟ್ಟಿಗೆಹಾರ, ವರದಿಗಾರರು.

0 Comments