ಮೂಡಿಗೆರೆ : ಸ್ವತಃ ಬಿಜೆಪಿಯವರೇ ನನ್ನ ವಿರುದ್ಧ ತೀವ್ರವಾದ ಪಿತೂರಿ ನಡೆಸುತ್ತಿದ್ದಾರೆ ನಾನು ಕಾಂಗ್ರೆಸ್ ಪಕ್ಷವನ್ನು ಸೇರುತ್ತೇನೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸುವುದನ್ನು ನಿಲ್ಲಿಸಬೇಕೆಂದು ಶಾಸಕ ಎಂ.ಪಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಕಳೆದ ಕೆಲದಿನಗಳಿಂದ ಮೂಡಿಗೆರೆಯ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳ ಕುರಿತಾಗಿ ಮಾತನಾಡಿದ ಅವರು ನಾನೊಬ್ಬ ಬಿಜೆಪಿಯ ನಿಷ್ಠಾವಂತ, ನಾನೇಕೆ ಕಾಂಗ್ರೆಸ್ಗೆ ಸೇರ್ಪಡೆಗೊಳ್ಳಲಿ ಇದು ನನ್ನ ವಿರುದ್ಧವಾಗಿ ನಡೆಸುತ್ತಿರುವ ಕುತಂತ್ರ ಎಂದು ಗುಡುಗಿದ್ದಾರೆ.

ಸಂಪುಟ ಪುನರ್ ರಚನೆಯಾಗುವ ಈ ಸಮಯದಲ್ಲಿ ನನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ, ನಾನು ಎಂದಿಗೂ ಕೂಡ ಸಚಿವ ಸ್ಥಾನಕ್ಕಾಗಿ ಅಥವಾ ಯಾವುದೇ ಬೋರ್ಡುಗಳನ್ನು ಪಡೆದುಕೊಳ್ಳುವ ಸಲುವಾಗಿ ಲಾಬಿ ನಡೆಸಿಲ್ಲ. ಆದರೂ  ನನ್ನ ಕುರಿತಾಗಿ ಹೆಚ್ಚಿನ ಅಪಪ್ರಚಾರ ನಡೆಸುತ್ತಿದ್ದಾರೆ ಇದು ಸರಿಯಲ್ಲ ಎಂದರು.

ವಿರೋಧ ಪಕ್ಷಗಳಿಗಿಂತ ಹೆಚ್ಚಾಗಿ ಸ್ವಪಕ್ಷೀಯರೇ ಈ ರೀತಿಯ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವುದು ಬೇಸರ ತಂದಿದೆ. ನನ್ನ ವಿರುದ್ಧ ಪಿತೂರಿ ನಡೆಸುವುದನ್ನು ಈ ಕೂಡಲೇ ನಿಲ್ಲಿಸಬೇಕೆಂದು ಗುಡುಗಿದ್ದಾರೆ.

ತನು ಕೊಟ್ಟಿಗೆಹಾರ, ವರದಿಗಾರರು.