ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ದೇವನ್ ಗುಲು ಸಮೀಪದ ಪೊದೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯ ಜೇಬಿನಲ್ಲಿ ವಿಳಾಸದ ಗುರುತಿನ ಚೀಟಿ ದೊರೆತ ಕಾರಣ ಮೃತರನ್ನು ಹಾವೇರಿ ಜಿಲ್ಲೆಯ ನೆಗೂರು ಗ್ರಾಮದ ನಿವಾಸಿ ಪರಮೇಶ್ವರಪ್ಪ ಎಂದು ಗುರುತಿಸಲಾಗಿದೆ. ನೇಣು ಬಿಗಿದುಕೊಂಡ ರೀತಿಯಲ್ಲಿ ಶವ ಇತ್ತು ಎಂದು ತಿಳಿದುಬಂದಿದೆ.
ಘಟನೆಯ ಕುರಿತಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ತನು ಕೊಟ್ಟಿಗೆಹಾರ, ವರದಿಗಾರರು

0 Comments