ಕಳಸ :(ನ್ಯೂಸ್ ಮಲ್ನಾಡ್ ವರದಿ) ಕಳಸ ತಾಲೂಕಿನ ಮರಸಣಿಗೆ ವ್ಯಾಪ್ತಿಯ ಮೈದಾಡಿ ಗುಡ್ಡ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು ವಿಸ್ತಾರವಾದ ಅರಣ್ಯ ಪ್ರದೇಶ ನಾಶವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸಾ ತಾಲೂಕಿನ ಮರಸಣಿಗೆ ವ್ಯಾಪ್ತಿಯ ಮೈದಾಡಿ ಹಾಗೂ ಮಿಲ್ಲಿನ ಗುಡ್ಡ ಅರಣ್ಯ ಪ್ರದೇಶಕ್ಕೆ ಶನಿವಾರ ಸಂಜೆಯ ವೇಳೆಯಲ್ಲಿ ಬೆಂಕಿ ತಗುಲಿ ಗುಡ್ಡದ ಅನೇಕ ಪ್ರದೇಶ ಬೆಂಕಿಗಾಹುತಿಯಾಗಿದೆ.
ಇದನ್ನೂ ಓದಿ : ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿಕೊಂಡು ಪ್ರಾಣಬಿಟ್ಟ ಇಬ್ಬರು ಯುವಕರು
ಒಂದುವರೆ ಎಕರೆ ಅರಣ್ಯ ಪ್ರದೇಶವು ಸುಟ್ಟು ಕರಕಲಾಗಿದೆ ಎಂದು ಅಂದಾಜಿಸಲಾಗಿದೆ, ಪಿಂಕಿ ತಗುಲಿದ್ದ ವಿಚಾರ ತಿಳಿಯುತ್ತಿದ್ದಂತೆ ಕಳಸದ ಸ್ಥಳೀಯರು ತಡಮಾಡದೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ, ತಡಮಾಡದೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಆಟೋ ಚಾಲಕರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿ ವರ್ಗ ಮತ್ತು ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಅವಘಡಕ್ಕೆ ಮಿಲ್ಲಿನ ಗುಡ್ಡೆ ಅರಣ್ಯ ಪ್ರದೇಶದಲ್ಲಿರುವ ವಿದ್ಯುತ್ ಗ್ರೂಪ್ ಆಪರೇಟರ್ ಸಿಸ್ಟಮ್ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯ ಪ್ರದೇಶಕ್ಕೆ ಬೆಂಕಿ ತಗುಲುವ ಸಾಧ್ಯತೆಗಳು ಹೆಚ್ಚಿದ್ದು ಈ ಕುರಿತು ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕೆಂದು ಸಾರ್ವಜನಿಕರು ಕೋರಿದ್ದಾರೆ.

0 Comments