ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ತಹಶೀಲ್ದಾರ್ ಅಂಬುಜಾ ಅವರ ಕಾರು ಚಾಲಕ ವಿಜೇತ್ ಆತ್ಮಹತ್ಯೆ ಪ್ರಕರಣದಲ್ಲಿ ನಡೆದ ಪ್ರತಿಭಟನೆ ಸಮಯದಲ್ಲಿ ಪತ್ರಕರ್ತರನ್ನು ಗುರಿಯಾಗಿಸಿ ಅವ್ಯಾಚ್ಯ ಪದಗಳಿಂದ ನಿಂದಿಸಿರುವುದಕ್ಕೆ ಪಕ್ಷದ ಪರವಾಗಿ ಕ್ಷಮೆಯಾಚಿಸುವುದಾಗಿ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡರು ಹೇಳಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿನ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ವಿಜೇತ್ ಸಾವಿನ ನೋವಿನ ಸಂಧರ್ಭದಲ್ಲಿ ವಿಷಯದ ಕುರಿತ ತಿಳುವಳಿಕೆ ಕೊರತೆಯಿಂದ ಭಾವೋಧ್ವೇಗಕ್ಕೆ ಒಳಗಾಗಿ ಪತ್ರಕರ್ತರನ್ನು ಗುರಿಯಾಗಿಸಿ ಹೇಳಿಕೆ ನೀಡಲಾಗಿತ್ತು. ಇದು ಉದ್ದೇಶಪೂರ್ವಕವಾಗಿ ಹೇಳಿದ ಹೇಳಿಕೆ ಆಗಿರಲಿಲ್ಲ ಆಕಸ್ಮಿಕವಾಗಿ ನಡೆದದ್ದಾಗಿತ್ತು, ಪತ್ರಕರ್ತರ ಬಗ್ಗೆ ಗೌರವವಿದ್ದು ಯಾರ ಮನಸ್ಸನ್ನೂ ನೋಯಿಸುವ ಉದ್ದೇಶ ನಮ್ಮ ಪಕ್ಷದ ಮುಖಂಡರಿಗೆ ಇರಲಿಲ್ಲ, ಇಂತಹ ಸಂದರ್ಭದಲ್ಲಿ ಪತ್ರಕರ್ತರನ್ನು ಗುರಿಯಾಗಿಸಿ ಇಂತಹ ಹೇಳಿಕೆಯನ್ನು ಯಾರೂ ನೀಡಬಾರದು ಇದು ಪಕ್ಷಕ್ಕೆ ಸಹ ಹಾನಿಯಾಗುತ್ತದೆ. ಮುಂದಿನ ದಿನಗಳಲ್ಲಿ ಸಮಾಜದ ಉನ್ನತಿಗಾಗಿ ಎಲ್ಲರೂ ಒಟ್ಟಿಗೆ ಕಾರ್ಯನಿರ್ವಹಿಸೋಣ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಜಿ.ಎಂ. ರಾಜಶೇಖರ್, ಕಾರ್ಯದರ್ಶಿ ರಾಜೇಶ್, ತಾಲೂಕಿನ ಪತ್ರಕರ್ತರು ಹಾಗೂ ಪತ್ರಕರ್ತರ ಸಂಘದ ಅಧ್ಯಕ್ಷರಾದ ಅಂಗುರ್ಡಿ ದಿನೇಶ್ ಹಾಗೂ ಎಚ್.ಎಸ್. ಸುಬ್ರಹ್ಮಣ್ಯ ಇದ್ದರು.

0 Comments