ಕೊಡಗು : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗೋವನ್ನು ಹತ್ಯೆಗೈದು ಮಾಂಸವನ್ನು ಸಾಗಾಟ ನಡೆಸಲು ಯತ್ನಿಸಿದ ಅಸ್ಸಾಂ ಮೂಲದ ವ್ಯಕ್ತಿಯನ್ನು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ದಾಳಿ ನಡೆಸಿ ಪೊಲೀಸರಿಗೊಪ್ಪಿಸಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಂಬೂರುವಿನಲ್ಲಿ ನಡೆದಿದೆ. ಕುಂಬೂರಿನ ಎಸ್ಟೇಟ್ ನಲ್ಲಿ ಕೆಲಸ ಮಾಡುವ ಅಸ್ಸಾಂ ನ ಕಾರ್ಮಿಕರು ರಾತ್ರಿಯ ವೇಳೆ ಹಸುವನ್ನು ಹತ್ಯೆಗೈದು ಮಾಂಸ ಮಾಡಿದ್ದಾರೆ. ಮಾಂಸವನ್ನು ಸಾಗಾಟ ನಡೆಸುವ ಸಂದರ್ಭದಲ್ಲಿ ಹಿಂದೂ ಜಾಗರಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಸ್ಥಳೀಯ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿ ಮಾಂಸದ ಸಮೇತ ಆರೋಪಿಯನ್ನು ಸೆರೆ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. 

ಇದನ್ನೂ ಓದಿ : ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ; ಕುಟುಂಬಕ್ಕೆ ಆಸರೆಯಾಗಬೇಕಿದ್ದ ಯುವಕ ಸಾವು

ಈ ಕೃತ್ಯವನ್ನು ಎಸಗಿದ ಆರೋಪಿಯನ್ನು ರಜಾಕ್ ಎಂದು ಗುರುತಿಸಲಾಗಿದೆ. ಈತನ ಜೊತೆಗೆ ಇನ್ನಿತರ ಆರೋಪಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದು ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸುವ ಸಂದರ್ಭದಲ್ಲಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ ಎಂದು ತಿಳಿದುಬಂದಿದೆ. 

ಕಾರ್ಯಕರ್ತರು ಒಪ್ಪಿಸಿರುವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಉಳಿದ ಆರೋಪಿಗಳನ್ನು ಸೆರೆ ಹಿಡಿಯುವ ಸಲುವಾಗಿ ಪೊಲೀಸರು ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಕೃತ್ಯ ಎಸಗಿದ ಆರೋಪಿಗಳಿಗೆ ಗೋಹತ್ಯಾ ನಿಷೇಧ ಕಾಯ್ದೆಯ ಅಡಿಯಲ್ಲಿ ಬರುವ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಘಟನೆಗಳ ಕಾರ್ಯಕರ್ತರು ಪೊಲೀಸರನ್ನು ಆಗ್ರಹಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸ್ಥಳೀಯ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.