ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನ ನಗರಸಭೆ ಅಧಿಕಾರಿಗಳು ನಗರಸಭೆ ವ್ಯಾಪ್ತಿಗೆ ಬರುವ ಜಾಗದಲ್ಲಿ ರಸ್ತೆಗೆ ಅಡ್ಡಲಾಗಿ ನಿರ್ಮಾಣ ಮಾಡಿದ್ದ ಕಟ್ಟಡಗಳನ್ನು ಇಂದು ತೆರವುಗೊಳಿಸಿದ್ದಾರೆ.

ಚಿಕ್ಕಮಗಳೂರು ನಗರದ ಪೆನ್ಶನ್ ಮೊಹಲ್ಲಾದಲ್ಲಿ ರಸ್ತೆಗೆ ಅಡ್ಡಲಾಗಿ ನಿರ್ಮಾಣ ಮಾಡಿದ್ದ ಅನೇಕ ಮನೆ ಹಾಗೂ ಕಟ್ಟಡಗಳನ್ನು ಇಂದು ನಗರಸಭಾ ಅಧ್ಯಕ್ಷರಾದ ವರಸಿದ್ಧಿ ವೇಣುಗೋಪಾಲ್ ಅವರ ಸೂಚನೆಯ ಮೇರೆಗೆ ನಗರಸಭಾ ಅಧಿಕಾರಿಗಳು ಜೆಸಿಬಿ ಮುಖಾಂತರ ಇಂದು ತೆರವುಗೊಳಿಸಿದ್ದಾರೆ.

ಇದನ್ನೂ ಓದಿ : ಆತ್ಮಹತ್ಯೆಗೆ ಶರಣಾದ ಶೃಂಗೇರಿಯ ಯುವಕ

ನಗರಸಭಾ ವ್ಯಾಪ್ತಿಗೆ ಸಂಬಂಧಿಸಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಗೇಟ್, ಮುಂತಾದವುಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.