ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಕ್ಷುಲ್ಲಕ ಕಾರಣಕ್ಕೆ ಕುಟುಂಬದ ಇಬ್ಬರು ಯುವಕರು ಹೊಡೆದಾಡಿಕೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಶಿವಮೊಗ್ಗ ಹೊರವಲಯದ ಸುಳೆಬೈಲು ಶಾಂತಿನಗರ ಎರಡನೇ ಕ್ರಾಸ್ ನಲ್ಲಿ ಸಲೀಮ್ ಅಹಮದ್ ಹಾಗೂ ಅಬ್ದುಲ್ ಎಂಬ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು ಇಬ್ಬರು ಪರಸ್ಪರ ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿಕೊಂಡು ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಸಾಲಬಾಧೆ ತಡೆಯಲಾರದೆ ಆತ್ಮಹತ್ಯೆಗೆ ಶರಣಾದ ರೈತ

ಕೌಟುಂಬಿಕ ವೈಶಮ್ಯದ ಹಿನ್ನೆಲೆ ಕುಟುಂಬಸ್ಥರ ನಡುವೆ ಆರಂಭವಾದ ಗಲಾಟೆ ನಿನ್ನೆ ಪರಸ್ಪರ ಕೊಲೆಯಲ್ಲಿ ಅಂತ್ಯವಾಗಿದೆ. ಮಾತಿಗೆ ಮಾತು ಬೆಳೆದು ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿಕೊಂಡು ಗಂಭೀರವಾಗಿ ಗಾಯಗೊಂಡಿದ್ದರು ನಂತರದಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾದರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆ ಫಲಿಸದೆ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ಘಟನೆಯ ಕುರಿತಾಗಿ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.