ರಿಪ್ಪನ್ ಪೇಟೆ : (ನ್ಯೂಸ್ ಮಲ್ನಾಡ್ ವರದಿ) ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತಕ್ಕೆ ಓರ್ವ ಯುವಕ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಹೆದ್ದಾರಿಪುರದ ಮೂಗುಡ್ತಿ ಸಮೀಪದಲ್ಲಿ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕುಟುಂಬಕ್ಕೆ ಆಸರೆಯಾಗಿ ನಿಲ್ಲಬೇಕಿದ್ದ ಯುವಕ ದಾರುಣವಾಗಿ ಮೃತಪಟ್ಟಿದ್ದಾನೆ.
ಇದನ್ನೂ ಓದಿ : ಊರಾಚೆಗೆ ಮೆಸ್ಕಾಂ ಕಛೇರಿ ಸ್ಥಳಾಂತರ, ಜನರಿಗೆ ಆಗದಿರಲಿ ಅವಾಂತರ : ಕಛೇರಿ ಸ್ಥಳಾಂತರಕ್ಕೆ ಗ್ರಾಮಸ್ಥರ ವಿರೋಧ
ಈ ಅಪಘಾತದಲ್ಲಿ ಮೃತಹೊಂದಿದ ಯುವಕನನ್ನು ಹೆದ್ದಾರಿಪುರದ ಪುನೀತ್ ಗೌಡ ಎಂದು ಗುರುತಿಸಲಾಗಿದೆ. ಈತನು ರಮೇಶ್ ಗೌಡ ಅವರ ಓರ್ವನೇ ಸುಪುತ್ರನಾಗಿದ್ದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾನೆ.
ಅಪಘಾತಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಯುವಕನ ಸಾವಿನ ಸುದ್ದಿಯನ್ನು ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಕುಟುಂಬದ ಆಧಾರ ಸ್ತಂಭವನ್ನು ಕಳೆದುಕೊಂಡಿರುವ ಕುಟುಂಬ ಶೋಕದಲ್ಲಿ ಮುಳುಗಿದೆ. ಸ್ಥಳೀಯರು ಹಾಗೂ ಕುಟುಂಬಸ್ಥರು ಅತೀವ ನೋವನ್ನು ವ್ಯಕ್ತಪಡಿಸಿದ್ದಾರೆ.

0 Comments