ಕಡೂರು : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಜೂಜಾಟ ಆಡುತ್ತಿದ್ದವರನ್ನು ಜಿಲ್ಲೆಯ ವಿವಿಧೆಡೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. 

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಯಗಟಿ,ಕಡೂರು, ಠಾಣಾ ಪೊಲೀಸರು ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ 17 ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಒಟ್ಟಾರೆ 24,940 ನಗದು ಹಣವನ್ನು ವಶ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ದಂಪತಿಗಳು ಚಲಿಸುತ್ತಿದ್ದ ಕಾರ್ ಅಪಘಾತ : ಪತ್ನಿ ಸಾವು ಪತಿ ಆಸ್ಪತ್ರೆಗೆ ದಾಖಲು

ಈ ಕುರಿತು ಠಾಣೆಯಲ್ಲಿ 03 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಪೊಲೀಸರು ಈ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ. ಮಲೆನಾಡು ಭಾಗದ ಪೊಲೀಸರು ಈ ರೀತಿಯ ಅನೇಕ ದಾಳಿಗಳನ್ನು ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಈ ಹಿಂದಿನಿಂದಲೂ ಯಶಸ್ವಿಯಾಗಿದ್ದಾರೆ. ಮುಂಬರುವ ದಿನಗಳಲ್ಲಿ ಯಾರೂ ಕೂಡ ಈ ರೀತಿಯ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು ಒಂದು ವೇಳೆ ಈ ರೀತಿಯ ಘಟನೆಗಳು ಮರುಕಳಿಸಿದಲ್ಲಿ ತಪ್ಪಿತಸ್ಥರಿಗೆ ಸೂಕ್ತ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.