ನರಸಿಂಹರಾಜಪುರ : (ನ್ಯೂಸ್ ಮಲ್ನಾಡ್ ವರದಿ) ಕಳ್ಳರು ಮನೆಯೊಂದಕ್ಕೆ ನುಗ್ಗಿ ಕಳ್ಳತನ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮೂಡಿಗೆರೆ : ಚಿರತೆ ದಾಳಿಗೆ ಹಸು ಬಲಿ; ಆತಂಕದಲ್ಲಿರುವ ಸ್ಥಳೀಯರು

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪದ ಜನತಾ ಕಾಲೋನಿಯ ಶಫೀವುಲ್ಲ ಎಂಬುವವರ ಮನೆಗೆ ನುಗ್ಗಿದ ಕಳ್ಳರು ಕೈಚಳಕ ತೋರಿದ್ದಾರೆ. ಮನೆಯ ಬೀರುವಿನಲ್ಲಿದ್ದ ಉಂಗುರ, ಚಿನ್ನದ ತಾಳಿ ಸರ ಹಾಗೂ ಹಣ ಕಳ್ಳತನವಾಗಿದೆ ಎಂದು ನರಸಿಂಹರಾಜಪುರ ಠಾಣೆಗೆ ದೂರು ನೀಡಿದ್ದಾರೆ. 

ದೂರು ದಾಖಲಿಸಿಕೊಂಡ ಪೊಲೀಸರು ಬೆರಳಚ್ಚು ತಜ್ಞರಜೊತೆಗೆ, ಶ್ವಾನದಳದ ಸಮೇತ ಕಳ್ಳತನವಾದ ಮನೆಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆರೋಪಿಗಳನ್ನು ಸೆರೆ ಹಿಡಿಯುವ ಸಲುವಾಗಿ ಪೊಲೀಸರು ಬಲೆ ಬೀಸಿದ್ದಾರೆ.