ಹಾಸನ : (ನ್ಯೂಸ್ ಮಲ್ನಾಡ್ ವರದಿ) ಆಟವಾಡುತ್ತಿದ್ದ ಬಾಲಕಿಯ ಮೇಲೆ ಕಾಮುಕನೋರ್ವ ಅತ್ಯಾಚಾರ ಎಸಗಿದ ಹೇಯ ಕೃತ್ಯ ಬೆಳಕಿಗೆ ಬಂದಿದೆ.
ಹಾಸನ ತಾಲೂಕಿನ ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪಕ್ಕದ ಮನೆಯ 23 ವರ್ಷ ಪ್ರಾಯದ ಕಾಮುಕ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಎಸಗಿದ್ದಾನೆ.
ಇದನ್ನೂ ಓದಿ : ಹಿಜಾಬ್ ಧರಿಸಿ ಶಾಲೆಗೆ ಆಗಮಿಸಿದ್ದ ವಿದ್ಯಾರ್ಥಿನಿಯರು ಮನೆಗೆ ವಾಪಸ್; ಹೈಕೋರ್ಟ್ ಮಧ್ಯಂತರ ಆದೇಶ ಮೀರದಂತೆ ಶಾಲೆಗಳಿಗೆ ಸೂಚನೆ
ಬಾಲಕಿಯು 11 ವರ್ಷ ಪ್ರಾಯದವಳಾಗಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯು ಆಟವಾಡುತ್ತಿದ್ದಾಗ ಆರೋಪಿ ಕೀರ್ತಿಸಾಗರ್ ಅತ್ಯಾಚಾರಎಸಗಿದ್ದಾನೆ. ಈತನು ಬಾಲಕಿಯ ಪಕ್ಕದ ಮನೆಯವನಾಗಿದ್ದು ಸಂಚು ರೂಪಿಸಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಅತ್ಯಾಚಾರ ಎಸಗಿದ ಕಾಮುಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಆತನ ವಿಚಾರಣೆ ನಡೆಸುತ್ತಿದ್ದಾರೆ.ಅತ್ಯಾಚಾರದ ವಿರುದ್ಧವಾಗಿ ಕಠಿಣ ಕಾನೂನು ಕ್ರಮಗಳಿದ್ದರೂ ಕೂಡ ಆರೋಪಿಗಳು ಈ ರೀತಿಯ ಕೃತ್ಯವನ್ನು ಎಸಗುತ್ತಲೆ ಇರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೀಡು ಮಾಡಿದೆ.

0 Comments