ಮಡಿಕೇರಿ ತಾಲೂಕಿನ ಕೊಳಕೇರಿ ಗ್ರಾಮದಲ್ಲಿ ಈ ಘಟನೆ ದುಷ್ಕೃತ್ಯ ನಡೆದಿದ್ದು ನಾಲ್ವರು ಆರೋಪಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆನ್ನಲಾಗಿದೆ. ಮಧ್ಯರಾತ್ರಿಯ ವೇಳೆಗೆ ಮನೆಯ ಬಾಗಿಲನ್ನು ಮುರಿದು ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಇಬ್ಬರು ವೃದ್ದೆಯರನ್ನು ಕಟ್ಟಿಹಾಕಿ ಹಣ ಹಾಗೂ ಚಿನ್ನವನ್ನು ದರೋಡೆ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಅತ್ಯಾಚಾರದ ಆರೋಪದಡಿ ಜೈಲು ಸೇರಿದ್ದ ಮುಸ್ಲಿಂ ಯುವಕನೊಂದಿಗೆ ಶೃಂಗೇರಿಯ ಹಿಂದೂ ಯುವತಿ ಎಸ್ಕೇಪ್
ಮನೆಯಲ್ಲಿದ್ದ 2.5 ಲಕ್ಷ ಹಣ 83 ಗ್ರಾಂ ಚಿನ್ನ ಕಳ್ಳತನ ಆಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸ್ಥಳಕ್ಕಾಗಮಿಸಿದ ನಾಪೋಕ್ಲು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ ಹಾಗೂ ಪರಾರಿಯಾದ ನಾಲ್ವರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದ್ದು ಮನೆಯ ಮೇಲೆ ಹಾಗೂ ವಸ್ತುಗಳ ಮೇಲೆ ಅತ್ಯಂತ ಹೆಚ್ಚಿನ ನಿಗಾ ವಹಿಸಬೇಕೆಂದು ಪೊಲೀಸರು ಸಾರ್ವಜನಿಕರಿಗೆ ತಿಳಿಸಿದ್ದಾರೆ.

0 Comments