ಮಡಿಕೇರಿ : (ನ್ಯೂಸ್ ಮಲ್ನಾಡ್ ವರದಿ) ಹಗಲು ಸಮಯದಲ್ಲಿ ಮಹಿಳೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಧಾರುಣ ಘಟನೆ ಬೆಳಕಿಗೆ ಬಂದಿದೆ. 

ಕೊಡಗು ಜಿಲ್ಲೆಯ ವಿರಾಜಪೇಟೆ ಶ್ರೀಮಂಗಲ ವ್ಯಾಪ್ತಿಯಲ್ಲಿ ನಡೆದಿದ್ದು ಇಬ್ಬರು ಮಹಿಳೆಯರ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಲಾಗಿದೆ. ಸ್ಥಳದಲ್ಲೇ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಹಾಗೂ ಇನ್ನೋರ್ವ ಮಹಿಳೆಯ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ಮೃತಪಟ್ಟ ಮಹಿಳೆಯನ್ನು ಪ್ರೇಮ ಎಂದು ಗುರುತಿಸಲಾಗಿದೆ. ಸ್ಥಳೀಯರ ನೆರವಿನಿಂದ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಾಗದ ವಿಚಾರವಾಗಿ ಸಂಬಂಧಿಕರೇ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನಾ ಸಂಬಂಧ ಶ್ರೀಮಂಗಲ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಆರೋಪಿ ತಲೆ ಮರೆಸಿಕೊಂಡಿದ್ದು ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ. 

ಇದನ್ನೂ ಓದಿ : ತಹಶೀಲ್ದಾರ್ ಅಂಬುಜಾ ಸೇರಿದಂತೆ ಶೃಂಗೇರಿ ಹಕ್ಕುಪತ್ರ ಹಗರಣದ ರೂವಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ. ತನಿಖೆ ಪೂರ್ಣಗೊಳ್ಳುವ ಮೊದಲೇ ಇ ಸ್ವತ್ತು ರದ್ದು ಹಿನ್ನೆಲೆ: ತನಿಖಾ ತಂಡದಿಂದ ಶೃಂಗೇರಿ ತಾ.ಪಂ ಕಾರ್ಯ ನಿರ್ವಹಣಾಧಿಕಾರಿಯನ್ನು ಕೈ ಬಿಡುವಂತೆ ಒತ್ತಾಯ