ಶೃಂಗೇರಿ :(ನ್ಯೂಸ್ ಮಲ್ನಾಡ್ ವರದಿ) ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೂತುಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಟ್ಟಗೆರೆ ಸುನೀಲ್ ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಸುನೀಲ್ ವಾಹನಗಳ ಬಾಡಿಗೆಯನ್ನು ಮಾಡುತ್ತಿದ್ದರು. ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ, ಆದರೆ ನಿಖರ ಕಾರಣಗಳೇನು ಎಂಬುದು ಈವರೆಗೆ ತಿಳಿದು ಬಂದಿಲ್ಲ.
ಇದನ್ನೂ ಓದಿ : ಸುಧಾಕರ್ ಶೆಟ್ಟರನ್ನು ಶೃಂಗೇರಿ ಕ್ಷೇತ್ರದ ಜನತೆ ಗೆಲ್ಲಿಸಿ; ಕಾರ್ಯಕರ್ತರ ಸಭೆಯಲ್ಲಿ ಹೆಚ್ ಡಿ ರೇವಣ್ಣ
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸ್ಥಳೀಯರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ. ಘಟನೆಯ ಕುರಿತು ಸಂಪೂರ್ಣ ಮಾಹಿತಿ ಇನ್ನಷ್ಟೇ ದೊರೆಯಬೇಕಿದೆ. ಪರಿಚಯಸ್ಥರು ಹಾಗೂ ಗೆಳೆಯರು ಸುನೀಲ್ ಅವರ ಸಾವಿನ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

0 Comments