ಮೂಡಿಗೆರೆ : ಮಗುವೊಂದು ಕಾಲುಜಾರಿ ಆಕಸ್ಮಿಕವಾಗಿ ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ಬಳಿ ಈ ಘಟನೆ ನಡೆದಿದ್ದು ಕಾಲುಜಾರಿ ಮಗು ನೀರಿನ ಟ್ಯಾಂಕ್ ಗೆ ಬಿದ್ದ ಪರಿಣಾಮ ಸಾವನ್ನಪ್ಪಿದೆ. 

ಇದನ್ನೂ ಓದಿ : ಸುಧಾಕರ್ ಶೆಟ್ಟರನ್ನು ಶೃಂಗೇರಿ ಕ್ಷೇತ್ರದ ಜನತೆ ಗೆಲ್ಲಿಸಿ; ಕಾರ್ಯಕರ್ತರ ಸಭೆಯಲ್ಲಿ ಹೆಚ್ ಡಿ ರೇವಣ್ಣ

ಮೃತಪಟ್ಟ ಮಗು ಇಂದಾವರದ ಗೀತಾ ಶೇಷಪ್ಪ ದಂಪತಿಗಳ ಪುತ್ರಿ ಪ್ರಾರ್ಥನಾ (07) ಎಂದು ತಿಳಿದುಬಂದಿದೆ. ಘಟನೆಯ ಕುರಿತು ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಈ ಸಂಬಂಧ ಮಾಹಿತಿ ಪಡೆಯುತ್ತಿದ್ದಾರೆ. 

ಮಗುವನ್ನು ಕಳೆದುಕೊಂಡ ಪೋಷಕರು ಅತ್ಯಂತ ದುಃಖಕ್ಕೀಡಾಗಿದ್ದಾರೆ, ಅವರ ಆಕ್ರಂದನ ಮುಗಿಲು ಮುಟ್ಟಿದ್ದು ಗ್ರಾಮಸ್ಥರು ಹಾಗೂ ಸ್ಥಳೀಯರು ಮನೆಗೆ ಧಾವಿಸಿ ನೋವಿನಲ್ಲಿರುವ ಕುಟುಂಬಕ್ಕೆ ಸಾಂತ್ವಾನ ಹೇಳುತ್ತಿದ್ದಾರೆ.

ತನು ಕೊಟ್ಟಿಗೆಹಾರ, ವರದಿಗಾರರು