ಹಾಸನ : (ನ್ಯೂಸ್ ಮಲ್ನಾಡ್ ವರದಿ) ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಬೇಕು ಹಿಜಾಬ್ ನಮ್ಮ ಹಕ್ಕು ಎಂದು ಆಗ್ರಹಿಸಿ ಇಂದು ಹಾಸನದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಹಾಸನದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿದ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದು ಮುಸಲ್ಮಾನ್ ಮಹಿಳೆಯರ ಮೂಲಭೂತ ಹಕ್ಕು ಆದರೆ ರಾಜಕೀಯ ಕಾರಣಗಳಿಂದಾಗಿ ನಮಗೆ ಹಿಜಾಬ್ ಧರಿಸಲು ಅನುಮತಿ ನೀಡುತ್ತಿಲ್ಲ ಇದು ಖಂಡನಾರ್ಹ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ಟ್ರ್ಯಾಕ್ಟರ್ ಬಳಸಿ ತಮ್ಮನ ಕೊಲೆಗೆ ಯತ್ನಿಸಿದ ಸಹೋದರ ; ದೇಹದ ಕೆಲ ಭಾಗಗಳಿಗೆ ಗಂಭೀರ ಹೊಡೆತ
ಹಿಜಾಬ್ ಸಮಾಜಕ್ಕೆ ಉತ್ತಮ ಸಂದೇಶ ಸಾರುತ್ತದೆ ಎಲ್ಲರೂ ಇದನ್ನು ಮನಗಂಡು ಹಾಗೂ ಸರ್ಕಾರ ಈ ಕುರಿತು ಚಿಂತಿಸಿ ನಮಗೆ ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಹಿಜಾಬ್ ಧರಿಸಿಕೊಂಡು ಕಾಲೇಜುಗಳಿಗೆ ತೆರಳಿದರೆ ಕಾಲೇಜಿನ ಒಳಗಡೆ ಪ್ರವೇಶಿಸಲು ಅನುಮತಿ ನೀಡುವುದಿಲ್ಲ ಇದರಿಂದಾಗಿ ನಮ್ಮ ಪಾಠ ಪ್ರವಚನಗಳು ವ್ಯರ್ಥ ವಾಗುತ್ತಿದೆ ಅನಾವಶ್ಯಕ ಕಾರಣಗಳಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡರು.
ಈ ಪ್ರತಿಭಟನೆಗೆ ವಿದ್ಯಾರ್ಥಿನಿಯರ ಜೊತೆಗೆ ಅವರ ಪೋಷಕರು ಹಾಗೂ ಮುಸ್ಲಿಂ ಸಮುದಾಯದ ಅನೇಕರು ಪಾಲ್ಗೊಂಡಿದ್ದರು ಹಾಗೂ ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದರು.

0 Comments