ಶಿವಮೊಗ್ಗ :(ನ್ಯೂಸ್ ಮಲ್ನಾಡ್ ವರದಿ) ಬಾಲಕಿ ಮೇಲೆ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯ ಅಕ್ಕನ ಗಂಡ ಈ ಕೃತ್ಯವನ್ನು ಎಸಗಿದ್ದಾನೆ.
ಇದನ್ನೂ ಓದಿ :ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದವರ ಬಳಿಯೇ ಕಸ ಎತ್ತಿಸಿದ ಯುವಕರು; ಪರಿಸರವನ್ನು ಸ್ವಚ್ಛವಾಗಿಡುವಂತೆ ಮನವಿ
ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆಯಲ್ಲಿ ಘಟನೆಯ ಕುರಿತು ಪ್ರಕರಣ ದಾಖಲಾಗಿದೆ. ಬಾಲಕಿಯು ಎಸ್ಸೆಸ್ಸೆಲ್ಸಿ ಅನುತ್ತೀರ್ಣಳಾಗಿ ಅವಳ ಅಕ್ಕನ ಮನೆಯಲ್ಲಿ ವಾಸವಿದ್ದಳು ಈ ಸಂದರ್ಭದಲ್ಲಿ ಆಕೆಯ ಅಕ್ಕನ ಗಂಡ ಅತ್ಯಾಚಾರಎಸಗಿ ಆಕೆಯನ್ನು ಗರ್ಭಿಣಿ ಮಾಡಿದ್ದಾನೆ. ಏಳನೇ ತಿಂಗಳಿಗೆ ಆಕೆಗೆ ಹೆರಿಗೆಯಾಗಿ ಮಗುವು ಸಾವನ್ನಪ್ಪಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ಲಭಿಸಿ ಅವರು ವಿಚಾರಣೆ ಆರಂಭಿಸಿದಾಗ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಯ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

0 Comments