ಫೆಬ್ರವರಿ 19 ರ ಶನಿವಾರ ಚಿಕ್ಕಮಗಳೂರಿನಲ್ಲಿ ಆಯೋಜನೆಗೊಂಡಿರುವ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಕಾರ್ಯಾಗಾರಕ್ಕೆ ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಶಿವಾನಂದ ಸ್ವಾಮಿ ಮಾಹಿತಿ ನೀಡಿದ್ದಾರೆ.
ಡಿಜಿಟಲ್ ಸದಸ್ಯತ್ವ ಕಾರ್ಯಾಗಾರವು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾಕ್ಟರ ಕೆಪಿ ಅಂಶುಮಂತ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಈ ಕಾರ್ಯಾಗಾರವನ್ನು ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.
ಈ ಡಿಜಿಟಲ್ ಸದಸ್ಯತ್ವ ಕಾರ್ಯಾಗಾರದಲ್ಲಿ ಡಿಕೆ ಶಿವಕುಮಾರ್ ಅವರ ಜೊತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರು ಆಗಿರುವ ಮತ್ತು ಕೆಪಿಸಿಸಿ ಜಿಲ್ಲಾ ಉಸ್ತುವಾರಿಗಳಾದ ಆರ್ ಧ್ರುವ ನಾರಾಯಣ್, ಮಾಜಿ ಮಂತ್ರಿಗಳಾದ ಕೆಜೆ ಜಾರ್ಜ್, ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡರು ಮತ್ತು ನಾಯಕರುಗಳು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

0 Comments