ಚಿಕ್ಕಮಗಳೂರು :(ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಂಬಂಧ ಹಾಗೂ ಸಾರ್ವಜನಿಕರಲ್ಲಿ ವಿಶ್ವಾಸವನ್ನು ತುಂಬಲು ಪೊಲೀಸ್ ಪಡೆ ಸನ್ನದ್ಧತೆಯನ್ನು ಪ್ರದರ್ಶಿಸಲು ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ರೂಟ್ ಮಾರ್ಚ್ ನಡೆಸಿದ್ದಾರೆ.

ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಭುಗಿಲೆದ್ದಿರುವ ಹಿಜಾಬ್ ಹಾಗೂ ಕೇಸರಿ ಶಾಲಿನ ನಡುವಿನ ಸಂಘರ್ಷವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಕೊಪ್ಪ ಪೊಲೀಸರು ರೂಟ್ ಮಾರ್ಚ್ ನಡೆಸಿದರು.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಠಾಣೆಯ ಪೊಲೀಸರು ಯಾರು ಶಾಂತಿ ಕದಡುವ ಯತ್ನ ಮಾಡಬಾರದು ರೀತಿಯ ಪ್ರಯತ್ನಗಳು ನಡೆಸಿದಲ್ಲಿ ಸನ್ನದ್ಧವಾಗಿ ಎದುರಿಸಲು ಪೊಲೀಸ್ ಇಲಾಖೆ ಸಿದ್ಧವಿದೆ ಸರ್ಕಾರದ ಆದೇಶಗಳನ್ನು ಪಾಲಿಸಬೇಕು ತೀರ್ಪು ಬರುವವರೆಗೂ ಶಾಂತಿಯಿಂದ ಇರಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದರು.ರೂಟ್ ಮಾರ್ಚ್ ಮಾಡುವ ಮುಖೇನ ಯಾರು ಕೂಡ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡಬಾರದು ಎಂದು ಹಾಗೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದೆಂದು ಎಚ್ಚರಿಸಿದರು.

ಇದನ್ನೂ ಓದಿ : ಅನಧಿಕೃತ ಶಿಲುಬೆ ತೆರವುಗೊಳಿಸಲು ಚರ್ಚಿನ ಮುಖ್ಯಸ್ಥರಿಗೆ ಹತ್ತು ದಿನಗಳ ಕಾಲಾವಕಾಶ ; ಮುಂದಿನ ಹೋರಾಟಕ್ಕೂ ಸಿದ್ಧ ಬಜರಂಗದಳ

ಅಂತೆಯೇ ಶೃಂಗೇರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸುವ ಮೂಲಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸದಾ ನಾವು ಮುನ್ನೆಲೆಯಲ್ಲಿರುತ್ತೇವೆ ಎಂಬ ಸಂದೇಶ ಸಾರಿದರು ಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ಮೂಡಿಸಿದರು.

ಒಟ್ಟಾರೆ ಕೊರೋನ ನಂತರದಲ್ಲಿ ಶಾಲಾ ಕಾಲೇಜುಗಳು ಆರಂಭವಾಗಿ ಎಲ್ಲವೂ ಸಮಯದಲ್ಲಿ ಹಿಜಾಬ್ ವಿವಾದ ಉಂಟಾಗಿ ನಡೆದಿರುವ ಘಟನೆಗಳು ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಗೊಂದಲವನ್ನುಂಟುಮಾಡಿದೆ.