ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಬಜರಂಗದಳದ ಕಾರ್ಯಕರ್ತ ಹರ್ಷ ಎಂಬ ಯುವಕನ ಮೃತ ದೇಹವನ್ನು ವೈದ್ಯರು ಹಸ್ತಾಂತರ ನಡೆಸಿದ ಬಳಿಕ ಶಿವಮೊಗ್ಗದಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಅನೇಕ ಸಂಖ್ಯೆಯಲ್ಲಿ ಜಮಾವಣೆಗೊಂಡಿರುವ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಸೀಗೆಹಟ್ಟಿಯಲ್ಲಿರುವ ಮೃತ ಹರ್ಷನ ಮನೆಗೆ ತೆರಳುತ್ತಿರುವ ಈ ಸಂದರ್ಭದಲ್ಲಿ ಆಕ್ರೋಶಗೊಂಡಿರುವ ಉದ್ರಿಕ್ತರು ಸಿಕ್ಕಸಿಕ್ಕಲ್ಲಿ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಮೃತ ಹರ್ಷನ ಶವವನ್ನು ಮೆರವಣಿಗೆಯ ಮೂಲಕ ಮನೆಗೆ ಸಾಗಿಸುವ ಸಂದರ್ಭದಲ್ಲಿ ಅನೇಕ ಸಂಖ್ಯೆಯಲ್ಲಿ ಜಮಾವಣೆಗೊಂಡಿರುವ ಜನರು ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಲ್ಲು ತೂರಾಟ ನಡೆಸುತ್ತಿದ್ದಾರೆ. ಅನೇಕ ವಾಹನಗಳು, ಮನೆ ಹಾಗೂ ಕಟ್ಟಡಗಳ ಗಾಜುಗಳನ್ನೂ ಉದ್ರಿಕ್ತರು ಪುಡಿ ಮಾಡಿದ್ದಾರೆ. 

ಇದನ್ನೂ ಓದಿ : ಮುಸಲ್ಮಾನ್ ಗೂಂಡಾಗಳು ಹರ್ಷನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ : ಕೆ ಎಸ್ ಈಶ್ವರಪ್ಪ

ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೂಡ ಅನೇಕ ಸಂಖ್ಯೆಯಲ್ಲಿ ಜಮಾವಣೆಗೊಂಡಿರುವ ಜನರು ಆಕ್ರೋಶ ಭರಿತರಾಗಿ ಕಲ್ಲುತೂರಾಟ ನಡೆಸುತ್ತಿದ್ದಾರೆ. ಅನೇಕ ಸಂಖ್ಯೆಯಲ್ಲಿ ಪೊಲೀಸರು ಸ್ಥಳದಲ್ಲಿದ್ದರೂ ಕೂಡ ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಶಿವಮೊಗ್ಗದಾದ್ಯಂತ ಇದೀಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರೌಡಿ ಶೀಟರ್ ನನ್ನು ವಶ ಪಡೆದ ಪೊಲೀಸರು: 

ಕಾರ್ಯಾಚರಣೆಗಿಳಿದಿರುವ ಪೊಲೀಸ್ ಅಧಿಕಾರಿಗಳು ಶಿವಮೊಗ್ಗದ ರೌಡಿ ಶೀಟರ್ ಕಾಶಿಫ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಗುಂಪಿನಲ್ಲಿ ನಾಲ್ವರಿಂದ ಐವರು ಇರುವ ಶಂಕೆಗಳಿದ್ದು ಉಳಿದ ಆರೋಪಿಗಳನ್ನು ಬಂಧಿಸಿದ ನಂತರ ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ನಿನ್ನೆ ತಡರಾತ್ರಿ ನಡೆದಿದ್ದೇನು?

ನಿನ್ನೆ ರಾತ್ರಿ ಹರ್ಷನ ಹತ್ಯೆಗೆ ಸಂಚು ರೂಪಿಸಿದ್ದ ದುಷ್ಕರ್ಮಿಗಳು ನಕಲಿ ನಂಬರ್ ಹೊಂದಿದ್ದ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಆಗಮಿಸಿ ಮಥುರಾ ಟಿಂಬರ್ ಬಳಿ ಕಾರನ್ನು ನಿಲ್ಲಿಸುತ್ತಾರೆ ಈ ಸಂದರ್ಭದಲ್ಲಿ ಆಟೋದಲ್ಲಿ ಆಗಮಿಸಿದ ವ್ಯಕ್ತಿಯೋರ್ವ ಅವರಿಗೆ ಮಾರಕಾಸ್ತ್ರ ನೀಡುತ್ತಾನೆ. ನಂತರ ಕಾರಿನಲ್ಲಿ ತೆರಳಿದ ದುಷ್ಕರ್ಮಿಗಳು ಹರ್ಷನನ್ನು ಹತ್ಯೆ ಮಾಡಿದ್ದಾರೆ.