ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಅಡಿಕೆ ಕುಯ್ಯುವಾಗ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಕಲ್ಲಕ್ಕಿ ಗ್ರಾಮದ ನಾರಾಯಣ ಎಂಬ 42 ವರ್ಷ ಪ್ರಾಯದ ವ್ಯಕ್ತಿಯು ತೋಟದಲ್ಲಿ ಅಡಿಕೆ ಕೊಯ್ಯುವಾಗ ಅಕಸ್ಮಾತಾಗಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಲೆನಾಡಿಗರು ಹೆಚ್ಚಿನದಾಗಿ ತೋಟಗಳಲ್ಲಿ ಕಾರ್ಯನಿರ್ವಹಿಸುವ ಈ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ. ಮೃತರನ್ನು ನೆನೆದು ಪರಿಚಯಸ್ಥರು ಹಾಗೂ ಸಂಬಂಧಿಕರು ತಮ್ಮ ನೋವನ್ನು ಹೊರಹಾಕಿದ್ದಾರೆ. ಈ ಘಟನೆಯು ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತನು ಕೊಟ್ಟಿಗೆಹಾರ, ವರದಿಗಾರರು



0 Comments