ಚಿಕ್ಕಮಗಳೂರು :(ನ್ಯೂಸ್ ಮಲ್ನಾಡ್ ವರದಿ) ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್ ಈಶ್ವರಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಕೆಲ ನಿರ್ಣಯಗಳನ್ನು ಕೈಗೊಂಡಿದ್ದಾರೆ

ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಕೆ.ಎಸ್ ಈಶ್ವರಪ್ಪ ಅವರು ಅತಿವೃಷ್ಟಿಯಿಂದ ಮನೆ ಹಾಗೂ ಜಮೀನನ್ನು ಕಳೆದುಕೊಂಡ ಕೃಷಿಕರಿಗೆ ಹಾಗೂ ಕುಟುಂಬಗಳಿಗೆ ಶೀಘ್ರವಾಗಿ ಪುನರ್ವಸತಿ ಹಾಗೂ ಪರಿಹಾರ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು ಈ ಕುರಿತು ಸಂಕ್ಷಿಪ್ತವಾಗಿ ತಿಳಿಸಿದ ಅವರು ಈ ಭಾಗದಲ್ಲಿ ಉಂಟಾದ ಭೀಕರ ಮಳೆಗೆ ಅನೇಕರು ನಿರಾಶ್ರಿತರಾಗಿದ್ದಾರೆ ತಮ್ಮ ಸ್ವತ್ತುಗಳನ್ನು ಜಮೀನನ್ನು ಕಳೆದುಕೊಂಡಿದ್ದಾರೆ ಅವರಿಗೆ ಅತೀ ಶೀಘ್ರವಾಗಿ ಪರಿಹಾರ ದೊರೆಯಬೇಕು ಜಮೀನು ಹಾನಿಗೊಳಗಾಗಿದ್ದಲ್ಲಿ ಇರುವ ಜಮೀನನ್ನು ವಶಪಡೆದುಕೊಂಡು ಬದಲಿ ವ್ಯವಸ್ಥೆಯನ್ನು ಕಲ್ಪಿಸುವಂತೆ ತಿಳಿಸಿದರು.

ಈ ಕುರಿತು ಧ್ವನಿಎತ್ತಿದ ಉಪಸಭಾಪತಿ ಎಂ.ಕೆ ಪ್ರಾಣೇಶ್ ಮನೆ ಹಾನಿಗೊಳಗಾದವರಿಗೆ ಅನಗತ್ಯವಾಗಿ ತಪ್ಪು ಮಾಹಿತಿಗಳನ್ನು ನೀಡಲಾಗುತ್ತಿದೆ. ಹೆಚ್ಚು ಹಾನಿಯುಂಟಾಗಿರುವ ಮನೆಗಳ ಮರುನಿರ್ಮಾಣದ ಬದಲಾಗಿ ಸರ್ಕಾರ ದುರಸ್ತಿ ಮಾಡುತ್ತದೆ ಎಂದು ಹೇಳಲಾಗುತ್ತಿದೆ ಇದರಿಂದಾಗಿ ಜನರು ಕಡಿಮೆ ಪರಿಹಾರ ಪಡೆಯುವಂತಾಗಿದೆ ಎಂದರು. 

ಬಡವರ ಉದ್ಧಾರಕ್ಕಾಗಿ ಶ್ರಮಿಸುವಂತೆ ಅಧಿಕಾರಿಗಳಿಗೆ ಸಚಿವರ ಸೂಚನೆ : 

ಜಿಲ್ಲೆಯಲ್ಲಿರುವ ಬಡವರ ಉನ್ನತಿಗಾಗಿ ಅಧಿಕಾರಿಗಳು ಶ್ರಮಿಸಬೇಕು ಅವರ ಉನ್ನತಿಗೆ ಎಲ್ಲರೂ ಸಹಕಾರ ನೀಡಬೇಕು ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕೆಂದು ನುಡಿದರು. 

ಸರ್ಕಾರದ ವತಿಯಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗುತ್ತಿದೆ ಇದಕ್ಕೊಂದು ಸ್ಪಷ್ಟವಾದ ಉತ್ತರ ದೊರೆಯಬೇಕು. ಜಿಲ್ಲೆಯಲ್ಲಿ ನಡೆಯುವ ಸರ್ಕಾರಿ ಕಟ್ಟಡಗಳ ಉದ್ಘಾಟನಾ ಸಮಾರಂಭ, ಶಂಕುಸ್ಥಾಪನೆ, ಮುಂತಾದ ವಿಶೇಷ ಕಾರ್ಯಕ್ರಮಗಳಲ್ಲಿ ಸ್ಥಳೀಯ ಜನ ಪ್ರತಿನಿಧಿಗಳಿಗೆ ಜಿಲ್ಲಾಡಳಿತ ಮಾಹಿತಿ ನೀಡುವುದಿಲ್ಲ ಇದಕ್ಕೊಂದು ಸೂಕ್ತ ಹಾಗೂ ಸಮರ್ಪಕವಾದ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೆಗೌಡ ಹಾಗೂ ಆಯನೂರು ಮಂಜುನಾಥ್ ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನೂ ಓದಿ : ಆಹಾರವನ್ನರಸಿ ಬಂದು ಕೆಸರಿಗೆ ಸಿಲುಕಿದ ಹೆಣ್ಣಾನೆ ; ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯ

ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಕೆ.ಎನ್ ರಮೇಶ್, ಎಸ್ಪಿ ಅಕ್ಷಯ್ ಎಂ.ಹೆಚ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿಖಾ, ಜಿ.ಪ್ರಭು, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.