ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಸಚಿವ ಕೆ ಎಸ್ ಈಶ್ವರಪ್ಪ ಅವರು ರಾಷ್ಟ್ರ ಧ್ವಜದ ಕುರಿತಾಗಿ ನೀಡಿರುವ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಇಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಯಿತು.

ಸಚಿವ ಕೆ.ಎಸ್ ಈಶ್ವರಪ್ಪ ಅವರು ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ರಾಷ್ಟ್ರಧ್ವಜಕ್ಕೆ ಅವಹೇಳನ ಮಾಡಿದ್ದಾರೆ ಈ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಮಾಡಬೇಕೆಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಇದನ್ನೂ ಓದಿ : ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಮೃತದೇಹದ ಮೆರವಣಿಗೆವೇಳೆ ಪ್ರಕ್ಷುಬ್ದ ವಾತಾವರಣ ! ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ !! ಗಾಳಿಯಲ್ಲಿ ಗುಂಡು ಓರ್ವನ ಕಾಲಿಗೆ ಗಾಯ

ಸಚಿವ ಈಶ್ವರಪ್ಪ ವಿಧಾನಸೌಧದಲ್ಲಿ ನೀಡಿರುವ ಹೇಳಿಕೆಯ ಕುರಿತಾಗಿ ಕ್ಷಮೆ ಯಾಚಿಸಬೇಕು ಅವರನ್ನು ಈ ಕೂಡಲೇ ಸಂಪುಟದಿಂದ ವಜಾ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಈಶ್ವರಪ್ಪ ಅವರನ್ನು ಮಂತ್ರಿಗಿರಿಯಿಂದ ವಜಾ ಮಾಡುವವರೆಗೆ ನಿರಂತರವಾಗಿ ಹೋರಾಟವನ್ನು ಮುಂದುವರೆಸಿಕೊಂಡು ಬರುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ, ಹಾಗೂ ತಕ್ಷಣವೇ ಈಶ್ವರಪ್ಪ ಅವರು ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. 

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಚಂದ್ರಣ್ಣ, ರಾಜಾರಾಮ ಹೆಗಡೆ, ಮುಂತಾದವರು ಹಾಜರಿದ್ದರು