ಹಾಸನ : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಮದ್ಯ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟ ವ್ಯಕ್ತಿಯನ್ನು ಹಾಸನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಾಸನ ತಾಲೂಕಿನ ಕಡ್ಡಯ ಗ್ರಾಮದ ರಂಗೆಗೌಡ ಎಂಬ ವ್ಯಕ್ತಿಯು ತಮ್ಮ ಅಂಗಡಿಯ ಮುಂಭಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಮದ್ಯವನ್ನು ಸೇವಿಸಲು ಅನುವು ಮಾಡಿಕೊಟ್ಟಿದ್ದರು ಈ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಿದ ಗೊರೂರು ಪೊಲೀಸ್ ಠಾಣೆಯ ಪೊಲೀಸರು ಪರವಾನಗಿ ಕುರಿತು ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ : ಚಿಕ್ಕಮಗಳೂರಿನಲ್ಲಿ ಮತ್ತೆ ಆರಂಭವಾದ ಹಿಜಾಬ್ ವಿವಾದ ; ಪರೀಕ್ಷೆ ಬರೆಯದೆ ಹಿಜಾಬ್ ಗಾಗಿ ಹೊರನಡೆದ ವಿದ್ಯಾರ್ಥಿನಿಯರು

ಆದರೆ ಯಾವುದೇ ಪರವಾನಗಿಯನ್ನು ಹೊಂದಿರದ ರಂಗೆಗೌಡ ಅಕ್ರಮವಾಗಿ ಮದ್ಯಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಗೊರೂರು ಪೊಲೀಸ್ ಠಾಣೆಯ ಪೊಲೀಸರು ಅವರನ್ನು ದಸ್ತಗಿರಿ ಮಾಡಿದ್ದಾರೆ. ಈ ಕುರಿತು ಹಾಸನದ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಈ ಕುರಿತು ಆತನಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. 

ಅಕ್ರಮವಾಗಿ ಮದ್ಯಪಾನಕ್ಕೆ ಯಾರೂ ಉತ್ತೇಜನ ನೀಡಬಾರದು ಈ ರೀತಿಯ ಕೃತ್ಯಗಳನ್ನು ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.