ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ನಾಳೆ ಶೃಂಗೇರಿಗೆ ಆಗಮಿಸಲಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಶೃಂಗೇರಿಗೆ ನಾಳೆ ದಿನಾಂಕ 25.02.2022 ರಂದು ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ ದೇವೇಗೌಡ ಆಗಮಿಸಲಿದ್ದಾರೆ ಅವರೊಂದಿಗೆ ಪತ್ನಿ ಚೆನ್ನಮ್ಮ ದೇವೇಗೌಡ ಹಾಗೂ ಮಾಜಿ ಸಚಿವರಾದ ರೇವಣ್ಣ ಅವರು ಆಗಮಿಸಲಿದ್ದಾರೆ. 

ಇದನ್ನೂ ಓದಿ : ಶೃಂಗೇರಿ ಪೊಲೀಸ್ ಠಾಣೆಯಲ್ಲಿ ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿ ವಿಚಾರಣೆ, ಠಾಣೆ ಸುತ್ತ ಭಿಗಿ ಭದ್ರತೆ

ನಾಳೆ ಬೆಳಗ್ಗೆ 10 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಅವರು ಶೃಂಗೇರಿಯ ಶಾರದಾ ಪೀಠಕ್ಕೆ ತೆರಳಿ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕೂಡ ಮಾಜಿ ಪ್ರಧಾನಿ ದೇವೇಗೌಡ ಅವರು ಶೃಂಗೇರಿ ಶಾರದೆಯ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿದ್ದರು. 

ಕುಟುಂಬದ ಸದಸ್ಯರು ಈ ಹಿಂದೆ ಶೃಂಗೇರಿಗೆ ಆಗಮಿಸಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ಶೃಂಗೇರಿಯ ಉಭಯ ಶ್ರೀಗಳ ದರ್ಶನವನ್ನು ಪಡೆದಿದ್ದರು.