ಕಡೂರು : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದವರನ್ನು ಕಾರ್ಯಾಚರಣೆಯ ಮೂಲಕ ಪೊಲೀಸರು ವಶಕ್ಕೆಪಡೆದ ಘಟನೆ ಬೆಳಕಿಗೆ ಬಂದಿದೆ. 

ಇದನ್ನೂ ಓದಿ  : ಅಕ್ರಮ ಭೂ ಮಂಜೂರಾತಿ ಆರೋಪ ಹಿನ್ನೆಲೆ : ಶೃಂಗೇರಿ ತಹಸೀಲ್ದಾರ್ ಅಂಬುಜಾ ಕರ್ತವ್ಯದಿಂದ ಅಮಾನತು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ರೈಲ್ವೆ ನಿಲ್ದಾಣದ ರಸ್ತೆಯ ಸಮೀಪದಲ್ಲಿ ಜೂಜಾಟದಲ್ಲಿ ತೊಡಗಿದ್ದ 09 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಹಾಗೂ ಅವರ ಬಳಿಯಿದ್ದ 18,410 ರೂ ನಗದು 07 ಮೋಟಾರ್ ಬೈಕ್ ಗಳನ್ನು ಕೂಡ ವಶ ಪಡಿಸಿಕೊಂಡಿದ್ದಾರೆ. 


ಜೂಜಾಟ ನಡೆಸುವುದು ಅಪರಾಧವಾಗಿದೆ ಸಾರ್ವಜನಿಕರು ಈ ರೀತಿಯ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗಬಾರದು ಅತ್ಯಂತ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ತಿಳಿಸಿದ್ದಾರೆ. ಒಂದು ವೇಳೆ ಈ ರೀತಿಯ ಕೃತ್ಯಗಳಲ್ಲಿ ಭಾಗಿಯಾದಲ್ಲಿ ಕಾನೂನಿನ ಅಡಿಯಲ್ಲಿ ಬರುವ ಶಿಕ್ಷೆಗೆ ಗುರಿಪಡಿಸುವುದಾಗಿ ತಿಳಿಸಿದ್ದಾರೆ.