ಹಾಸನ : (ನ್ಯೂಸ್ ಮಲ್ನಾಡ್ ವರದಿ) ಹಾಸನದಲ್ಲಿ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ ಆರೋಪಿಗಳನ್ನು ಕಾರ್ಯಾಚರಣೆಯ ಮೂಲಕ ಪೊಲೀಸರು ಬಂಧಿಸಿದ್ದಾರೆ.

ಹಾಸನದ ತಿಮ್ಲಾಪುರ ಅರಣ್ಯ ಪ್ರದೇಶದಲ್ಲಿ ಜೂಜಾಟ ನಡೆಸುತ್ತಿದ್ದ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿಯಲು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ : ಈಶ್ವರಪ್ಪ ಒಬ್ಬ ನಾಚಿಕೆ ಮಾನ ಮರ್ಯಾದೆ ಬಿಟ್ಟ ಗೂಂಡಾ : SDPI ವಾಗ್ದಾಳಿ

ಬಂಧಿತರಿಂದ ಆರು ಸಾವಿರದ ಐವತ್ತು ರೂಪಾಯಿ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಅಕ್ರಮ್ ಭಾಷಾ, ಅನಿಲ್ ಕುಮಾರ್, ರೇಣುಕಯ್ಯ, ಕುಮಾರ್ ಎಂದು ಗುರುತಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ದೊಡ್ಡ ಠಾಣೆ ಸಬ್ ಇನ್ಸ್ಪೆಕ್ಟರ್ ಮಧು ಹಾಗೂ ಠಾಣೆಯ ಸಿಬ್ಬಂದಿಗಳು ಭಾಗವಹಿಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸರನ್ನು ಇಲಾಖೆ ಅಭಿನಂದಿಸಿದೆ.