ಆಲ್ದೂರು : (ನ್ಯೂಸ್ ಮಲ್ನಾಡ್ ವರದಿ) ಬಾಲಕನೋರ್ವ ಜೋಕಾಲಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. 

ಇದನ್ನೂ ಓದಿ : ಚಿಕ್ಕಮಗಳೂರು : ಮದ್ಯದಂಗಡಿ ದರೋಡೆ ಮಾಡಿದ್ದ ಇಬ್ಬರು ಕಳ್ಳರು ಪೊಲೀಸರ ಬಲೆಗೆ

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದ ಗಣೇಶ್ ಎಂಬುವವರ ಪುತ್ರ ನಾಲ್ಕನೇ ತರಗತಿ ಓದುತ್ತಿದ್ದ ಬಾಲಕ ಚೇತನ್ (09) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. 

ಮನೆಯಲ್ಲಿ ತಂದೆಯೊಡನೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಲ್ಲಿದ್ದ ಜೋಕಾಲಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಅತ್ಯಂತ ಬಡತನದಲ್ಲಿದ್ದ ಈತನ ಪೋಷಕರು ಕೂಲಿ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು. ಮಗನನ್ನು ಕಳೆದುಕೊಂಡ ಪೋಷಕರು ಅತ್ಯಂತ ದುಃಖದಲ್ಲಿದ್ದಾರೆ. ಈತನ ಸಾವಿನ ಕುರಿತು ಕುಟುಂಬಸ್ಥರು ಹಾಗೂ ಅಕ್ಕ ಪಕ್ಕದಲ್ಲಿನ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.