ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ತೋಟದ ಕಾರ್ಮಿಕರನ್ನು ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಪಿಕಪ್ ಅವಘಡ ಉಂಟಾದ ಕಾರಣ 12 ಮಂದಿ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಾದ ದುರ್ಘಟನೆ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದ ಯಡದಳ್ಳಿಯ ಬಳಿ ಕೆಲಸಗಾರರನ್ನು ತೋಟದ ಕೆಲಸಕ್ಕೆಂದು ಪಿಕಪ್ ವಾಹನದಲ್ಲಿ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಪಿಕಪ್ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಇದನ್ನೂ ಓದಿ : ಅಡುಗೆ ಮಾಡುವಾಗ ವಿಷಸರ್ಪ ಕಚ್ಚಿ ಸಾವನ್ನಪ್ಪಿದ ಗೃಹಿಣಿ

ಗಾಯಗೊಂಡವರಿಗೆ ಶೃಂಗೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು  ಗಂಭೀರವಾಗಿ ಗಾಯಗೊಂಡ ಐವರನ್ನು ಬೇರೆ ಆಸ್ಪತ್ರೆಗಳಿಗೆ ರವಾನಿಸಲು ವೈದ್ಯರು ಸೂಚನೆ ನೀಡಿದ್ದಾರೆ.

 ಗಾಯಗೊಂಡವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಗಾಯಗೊಂಡ ಉಳಿದವರಿಗೆ ಶೃಂಗೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.