ಕಳಸ : (ನ್ಯೂಸ್ ಮಲ್ನಾಡ್ ವರದಿ) ಕಳಸ 2019 ರ ಮಹಾ ಮಳೆಗೆ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದ ಕಳಸದ ಸಂತ್ರಸ್ತರು ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.
ಇದನ್ನೂ ಓದಿ : ಮೃತ ಹರ್ಷನ ಕುಟುಂಬಕ್ಕೆ ಸರ್ಕಾರದ ವತಿಯಿಂದ 25 ಲಕ್ಷ ರೂ ಪರಿಹಾರ ಹಸ್ತಾಂತರ ಮಾಡಿದ ಬಿಎಸ್ವೈ
ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಆಕ್ರೋಶ ಹೊರಹಾಕಿದರು.
2019ರಲ್ಲಿ ಉಂಟಾದ ಭೀಕರ ಮಳೆಯಿಂದ ಕಳಸ ಸುತ್ತಮುತ್ತಲಿನ ಭಾಗದ ಅನೇಕರು ಮನೆಗಳನ್ನು ಕಳೆದುಕೊಂಡು ತಮ್ಮ ಅಗತ್ಯವಾದ ವಸ್ತುಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ ಆದರೆ ಸರ್ಕಾರ ಸಂತ್ರಸ್ತರಿಗೆ ಈವರೆಗೂ ಯಾವುದೇ ಪರಿಹಾರ ಒದಗಿಸದೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡದೆ ಜನರನ್ನು ಅತ್ಯಂತ ಹೇಯ ಸ್ಥಿತಿಗೆ ತಂದು ನಿಲ್ಲಿಸಿದೆ. ಅನೇಕ ಸಂತ್ರಸ್ತರು ಬಾಡಿಗೆ ಮನೆಯಲ್ಲಿದ್ದರು ಕೂಡ ಅವರಿಗೆ ಬಾಡಿಗೆ ಹಣ ನೀಡಲು ಸಾಧ್ಯವಾಗುತ್ತಿಲ್ಲ ಅವರಗೊಳನ್ನು ಕೇಳುವವರಾರು ಇಲ್ಲ ಎಂದು ಅಳಲನ್ನು ತೋಡಿಕೊಂಡರು.
ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಪ್ರತಿಭಟನೆ, ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು ಕೂಡ ಜಿಲ್ಲಾಡಳಿತ ತನ್ನ ಜವಾಬ್ದಾರಿಯನ್ನು ತೋರುತ್ತಿಲ್ಲ ಅತ್ಯಂತ ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿದೆ ಜನರಿಗೆ ಬದುಕಲು ಬಿಡಿ ಇಲ್ಲವೇ ದಯಾ ಮರಣಕ್ಕೆ ಅವಕಾಶ ಕೊಡಿ ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.
ಕನಿಷ್ಠ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡದೆ ಜನರನ್ನು ಬದುಕಲು ಬಿಡದೇ ಇರುವ ವ್ಯವಸ್ಥೆಯ ವಿರುದ್ದ ಜನರು ರೊಚ್ಚಿಗೆದ್ದಿದ್ದಾರೆ. ಈ ನಿಟ್ಟಿನಲ್ಲಿ ಪಂಜಿನ ಮೆರವಣಿಗೆ ನಡೆಸಿದ ಸಂತ್ರಸ್ತರು ತಮ್ಮ ಸಮಸ್ಯೆಗಳಿಗೆ ಕಿವಿಗೊಡದ ಜನಪ್ರತಿನಿಧಿಗಳಿಗೆ ಧಿಕ್ಕಾರ ಕೂಗಿದರು, ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

0 Comments