ನರಸಿಂಹರಾಜಪುರ : (ನ್ಯೂಸ್ ಮಲ್ನಾಡ್ ವರದಿ) ಒಣಗಿಸಲು ಹಾಕಿದ್ದ ಕಾಳುಮೆಣಸನ್ನು ಕಳ್ಳತನ ನಡೆಸಿದ್ದ ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.
ಇದನ್ನೂ ಓದಿ : ಅಳಿವಿನಂಚಿನ ಪ್ರಾಣಿ ಮೌಸ್ ಡೀರ್ ನ್ನು ಬೇಟೆಯಾಡಿದ ಮೂವರ ಬಂಧನ
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಹೊನ್ನೆಕೊಡಿಗೆ ಗ್ರಾಮದಲ್ಲಿ ಕಣದಲ್ಲಿ ಒಣಗಲು ಹಾಕಿದ್ದ 3.5 ಕ್ವಿಂಟಾಲ್ ಕಾಳುಮೆಣಸನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ನರಸಿಂಹರಾಜಪುರ ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಗಳು ಕಳವು ಮಾಡಿದ್ದ ಕಾಳುಮೆಣಸಿನ ಬೆಲೆ 1.75 ಲಕ್ಷ ಎಂದು ಅಂದಾಜಿಸಲಾಗಿದ್ದು ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.
ಈ ಕಾರ್ಯಾಚರಣೆಯನ್ನು ನರಸಿಂಹರಾಜಪುರ ಪಿಎಸ್ಸೈ ಹಾಗೂ ಪೊಲೀಸ್ ಠಾಣೆಯ ಸಿಬ್ಬಂದಿಗಳು ನಡೆಸಿದ್ದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಾಳುಮೆಣಸು ಹಾಗೂ ಟಾಟಾಏಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.

0 Comments