ಚಿಕ್ಕಮಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆಯ ಮೂಲಕ ಬಂದ ವ್ಯಕ್ತಿ ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ನಿವಾಸಿ ಚಂದ್ರಶೇಖರ್ (40) ಸಾವನ್ನಪ್ಪಿರುವ ವ್ಯಕ್ತಿ.
ಚಿಕ್ಕಮಗಳೂರಿನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಚಂದ್ರಶೇಖರ್ ಸ್ನೇಹಿತನಾದ ವೆಂಕಟೇಶ್ ಜೊತೆ ಧರ್ಮಸ್ಥಳಕ್ಕೆ ಚಾರ್ಮಾಡಿ ಘಾಟ್ ಮೂಲಕ ಪಾದಯಾತ್ರೆ ಮಾಡಿಕೊಂಡು ಇಂದು ಧರ್ಮಸ್ಥಳದ ನೇತ್ರಾವತಿಗೆ ಬಂದಿದ್ದು ಈ ವೇಳೆ ಸ್ನಾನ ಮಾಡಲು ನೀರಿಗೆ ಇಳಿದಿದ್ದಾರೆ. ಅವರಿಗೆ ಈಜಲು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತ ಚಂದ್ರಶೇಖರ ಅವರ ಶವವನ್ನು ಬೆಳ್ತಂಗಡಿಯ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತರಲಾಗಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ತನು ಕೊಟ್ಟಿಗೆಹಾರ, ವರದಿಗಾರರು.

0 Comments