ಬಾಳೆಹೊನ್ನೂರು : (ನ್ಯೂಸ್ ಮಲ್ನಾಡ್ ವರದಿ) ಬಾಳೆಹೊನ್ನೂರಿನ ಬಿ.ಕಣಬೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ಸ್ಪಂದನೆ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕರ್ತವ್ಯದಿಂದ ಬೇರೆಡೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರು : ಮದ್ಯದಂಗಡಿ ದರೋಡೆ ಮಾಡಿದ್ದ ಇಬ್ಬರು ಕಳ್ಳರು ಪೊಲೀಸರ ಬಲೆಗೆ
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯ ಬಿ. ಕಣಬೂರು ಗ್ರಾಮ ಪಂಚಾಯತ್ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೋಮಶೇಖರ್ ಕೆ.ಎಸ್ ಅವರು ಸಾರ್ವಜನಿಕರಿಗೆ ಸರಿಯಾದ ಸ್ಪಂದನೆ ನೀಡದೆ, ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಹಾಗೂ ಜನ ಪ್ರತಿನಿಧಿಗಳು ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಅನೇಕ ಬಾರಿ ದೂರು ಸಲ್ಲಿಸಿದ ಹಿನ್ನೆಲೆ ಅವರನ್ನು ಕರ್ತವ್ಯದಿಂದ ಬೇರೆಡೆಗೆ ವರ್ಗ ಮಾಡಿರುವುದಾಗಿ ತಿಳಿಸಿದ್ದಾರೆ.
ಬಿ. ಕಣಬೂರು ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ ಸೋಮಶೇಖರ್ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಳ್ಳಿ ಗ್ರಾಮ ಪಂಚಾಯತ್ ಗೆ ವರ್ಗಾವಣೆ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಜಿ.ಪ್ರಭು ಆದೇಶ ಮಾಡಿದ್ದಾರೆ.
ಆರೋಪದ ಕುರಿತು ಸಂಪೂರ್ಣವಾಗಿ ತನಿಖೆನಡೆಸಿ, ಸತ್ಯಾಸತ್ಯತೆಯನ್ನು ತಿಳಿದುಕೊಂಡು ಈ ಕುರಿತು ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಹಾಗೂ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಆರೋಪ ಹೊಂದಿರುವ ಸೋಮಶೇಖರ್ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

0 Comments