ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ)  ಚಿಕ್ಕಮಗಳೂರು ಕ್ಷೇತ್ರದ ಶಾಸಕರಾದ ಸಿ.ಟಿ ರವಿ ಅವರು ವಿವಿಧ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯವನ್ನು ನೆರವೇರಿಸಿದರು. 

ಇದನ್ನೂ ಓದಿ : ಚಿಕ್ಕಮಗಳೂರು : ಬೈಕ್ ಹಾಗೂ ಕಾರ್ ನಡುವೆ ಮುಖಾಮುಖಿ ಅಪಘಾತ ದಂಪತಿಗಳ ದುರ್ಮರಣ

ಚಿಕ್ಕಮಗಳೂರು ಜಿಲ್ಲೆಯ ಕುರುವಂಗಿ,ನಟ್ಟಿಕೆರೆ, ಗಂಗ ಬಸವನಹಳ್ಳಿ, ಪಿಳ್ಳೆನಹಳ್ಳಿ, ಹುಲಿಕೆರೆ, ಬಾನುರು, ಶಿವಪುರ ಸೇರಿದಂತೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಂದಾಯ ಇಲಾಖೆಯಿಂದ ಪಹಣಿ ಪತ್ರ, ಕೋವಿಡ್ ಚೆಕ್ ವಿತರಣೆ, ಕಾರ್ಮಿಕ ಇಲಾಖೆ ವತಿಯಿಂದ ಗಾರೆ ಕೆಲಸದ ಉಪಕರಣದ ವಿತರಣೆ, ಹಾಗೂ ಅಂಗವಿಕಲರಿಗೆ ವೀಲ್ ಚೇರ್ ವಿತರಣೆ, ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಸಂಪೂರ್ಣಗೊಂಡ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕರಾದ ಶ್ರೀಯುತ ಸಿಟಿ ರವಿ ಅವರು ನೆರವೇರಿಸಿದರು.

ಈ ಕುರಿತು ಮಾತನಾಡಿದ ಅವರು ಅಭಿವೃದ್ಧಿಯಿಂದಲೇ ಜನರ ವಿಶ್ವಾಸವನ್ನು ಪಡೆದುಕೊಳ್ಳಬೇಕು ಹಾಗಾಗಿ ಪ್ರತಿಯೊಂದು ಗ್ರಾಮದ ಅಭಿವೃದ್ಧಿಯೇ ನನ್ನ ಮೂಲ ಗುರಿ. ಗ್ರಾಮದ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ, ಪ್ರಧಾನಿ ನರೇಂದ್ರ ಮೋದಿಯವರು ಹೇಳಿದಂತೆ ಆತ್ಮನಿರ್ಭರ ಭಾರತದ ನಿರ್ಮಾಣ ಮಾಡಬೇಕು, ನಮ್ಮಲ್ಲಿ ಬೆಳೆದ ಬೆಳೆಯನ್ನು ನಮ್ಮಲ್ಲೇ ಖರೀದಿ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಮಾಜಿ ಸದಸ್ಯರುಗಳು, ಗ್ರಾಮ ಪಂಚಾಯತಿಯ ಅಧ್ಯಕ್ಷರು ಮತ್ತು ಸದಸ್ಯರು, ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.