ಕಡೂರು : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳ ಜೊತೆಗೆ ನಗದನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಬಾಳೆಹೊನ್ನೂರು : ಅಕ್ರಮವಾಗಿ ಬೇಟೆಯಾಡಿ ಸಂಗ್ರಹಿಸಿದ್ದ ಮಾಂಸವನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಟ್ಟೆಹೊಳೆ ಗ್ರಾಮದಲ್ಲಿ ಜೂಜಾಟ ಆಡುತ್ತಿದ್ದ 8 ಜನರ ಪೈಕಿ, ನಾಲ್ವರನ್ನು ಸೆರೆಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರು ದಾಳಿ ನಡೆಸಿದ ತಕ್ಷಣ ನಾಲ್ವರು ಎಸ್ಕೇಪ್ ಆಗಿದ್ದು ಅವರನ್ನು ಸೆರೆಹಿಡಿಯುವ ಸಲುವಾಗಿ ಪೊಲೀಸರು ಬಲೆ ಬೀಸಿದ್ದಾರೆ. 

ಬಂಧಿತ ನಾಲ್ವರು ಆರೋಪಿಗಳಿಂದ ಜೂಜಾಟಕ್ಕೆಂದು ಉಪಯೋಗಿಸಿದ್ದ 18,700 ರೂಪಾಯಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದು ಈ ಕುರಿತು ತನಿಖೆ ಆರಂಭಿಸಿದ್ದಾರೆ.

ಅಕ್ರಮವಾಗಿ ಜೂಜಾಟ ನಡೆಸುವುದು ಹಣ ಕಳೆದುಕೊಳ್ಳುವ ಈ ರೀತಿಯ ಕೃತ್ಯಗಳಲ್ಲಿ ಯಾರಾದರೂ ಭಾಗಿಯಾಗಿರುವುದು ಕಂಡುಬಂದರೆ ಕಾನೂನಿನಲ್ಲಿ ಕಠಿಣ ಶಿಕ್ಷೆಗೆ ಗುರಿಪಡಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯು ಪಿಎಸ್ಐ ಕಡೂರು ಪೊಲೀಸ್ ಠಾಣೆ ಅವರ ನೇತೃತ್ವದಲ್ಲಿ ನಡೆದಿದ್ದು ಕಡೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.