ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನ ದಂಟರಮಕ್ಕಿ ಕೆರೆಯ ಬಳಿ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು ದಂಪತಿಗಳು ಸ್ಥಳದಲ್ಲೇ ದಾರುಣವಾಗಿ ಅಂತ್ಯಕಂಡಿದ್ದಾರೆ. 

ಚಿಕ್ಕಮಗಳೂರಿನ ದಂಟರಮಕ್ಕಿ ಕೆರೆಯ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಪರಿಣಾಮ ಬೈಕಿನಲ್ಲಿ ಸಂಚಾರ ಮಾಡುತ್ತಿದ್ದ ದಂಪತಿಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಬೀರೂರು ಮೂಲದ ಆನಂದ್ (35) ಲಕ್ಷ್ಮೀ (33) ಎಂದು ತಿಳಿದುಬಂದಿದೆ.

ಕಾರ್ ಹಾಗೂ ಬೈಕ್ ನಡುವೆ ಅಪಘಾತ ನಡೆದ ರಭಸಕ್ಕೆ ಬೈಕ್ ಕಂದಕಕ್ಕೆ ಉರುಳಿ ಹೊತ್ತಿ ಉರಿದಿದೆ. ಮೃತ ದಂಪತಿಗಳು ಬೈಕ್ ನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. 

ಈ ಕುರಿತು ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಈ ಸಂಬಂಧ ಮಾಹಿತಿ ಕಲೆ ಹಾಕುತ್ತಿದ್ದಾರೆ.