ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ನಗರದಲ್ಲಿ ವ್ಯಾಪಾರ ಮಾಡುವ ತಳ್ಳುಗಾಡಿ ಅಂಗಡಿಗಳಲ್ಲಿ ಬಳಸುತ್ತಿದ್ದ ಪ್ಲಾಸ್ಟಿಕ್ ಕವರ್ ಗಳನ್ನು ನಗರಸಭೆಯ ಅಧ್ಯಕ್ಷರೇ ತೆರಳಿ ವಶಕ್ಕೆ ತೆಗೆದುಕೊಂಡಿದ್ದಾರೆ. 

ಇದನ್ನೂ ಓದಿ : ಅಡುಗೆ ಎಣ್ಣೆ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ ಕೆ. ಎನ್ ರಮೇಶ್

ಚಿಕ್ಕಮಗಳೂರು ನಗರದ ತೊಗರಿಹಂಕಲ್ ಸರ್ಕಲ್ ಹಾಗೂ ವಿಜಯಪುರ ಸರ್ಕಲ್ನಲ್ಲಿ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಸ್ಥರು ಬಳಕೆ ಮಾಡುತ್ತಿದ್ದ ಪ್ಲಾಸ್ಟಿಕ್ ಕವರ್ ಗಳ ಬಳಕೆಯನ್ನು ತಡೆಯುವ ಸಲುವಾಗಿ ಚಿಕ್ಕಮಗಳೂರು ನಗರಸಭೆಯ ಅಧ್ಯಕ್ಷರಾದ ವರಸಿದ್ದಿ ವೇಣುಗೋಪಾಲ್ ಅವರು ಬೀದಿ ಬದಿಯ ತಳ್ಳುಗಾಡಿಗಳ ಬಳಿ ತೆರಳಿ ಉಪಯೋಗಿಸುತ್ತಿದ್ದ ಕವರನ್ನು ವಶಕ್ಕೆ ಪಡೆದರು ಹಾಗೂ ದಂಡವನ್ನು ವಿಧಿಸಿದರು ಹಾಗೂ ಎಚ್ಚರಿಕೆ ನೀಡಿದ ಅವರು ಮುಂಬರುವ ದಿನಗಳಲ್ಲಿ ಈ ರೀತಿಯಾಗಿ ಮತ್ತೆ ಕವರ್ ಉಪಯೋಗಿಸಿದಲ್ಲಿ ಅವರ ಗಾಡಿಗಳನ್ನು ವಶಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದರು.

ಚಿಕ್ಕಮಗಳೂರು ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡುವುದು ನಗರಸಭೆಯ ಗುರಿಯಾಗಿದ್ದು ಈ ನಿಟ್ಟಿನಲ್ಲಿ ನಗರಸಭೆ ಆಡಳಿತ ಮಂಡಳಿ ಪೂರಕ ಕ್ರಮಗಳನ್ನು ಕೈಗೊಂಡಿದೆ ಎಂದರು ಹಾಗೂ ಚಿಕ್ಕಮಗಳೂರಿನ ಸಾರ್ವಜನಿಕರು ಇದಕ್ಕೆ ಸಂಪೂರ್ಣ ಬೆಂಬಲ ನೀಡಬೇಕು ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಚಿಕ್ಕಮಗಳೂರು ನಗರವನ್ನು ಸ್ವಚ್ಚ ಹಾಗೂ ನೈರ್ಮಲ್ಯ ನಗರವನ್ನಾಗಿ ಮಾರ್ಪಾಡು ಮಾಡಲು ಸಹಕಾರ ನೀಡಬೇಕು ಎಂದರು. 

ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರಾದ ಶ್ರೀ ವರಸಿದ್ಧಿ ವೇಣುಗೋಪಾಲ್ ಹಾಗೂ ನಗರಸಭೆಯ ಅಧಿಕಾರಿಗಳು ಹಾಜರಿದ್ದರು.