ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಯಿಂದ ಮಹಿಳೆಯೋರ್ವರು ಭೀಕರವಾಗಿ ಸಾವನ್ನಪ್ಪಿರುವ ದುರ್ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಕೆಳಗುರೂ ಗ್ರಾಮದ ಕಾಫಿ ತೋಟವೊಂದರಲ್ಲಿ ಕಾಳುಮೆಣಸು ಕುಯ್ಲು ಮಾಡುತ್ತಿದ್ದ ಮಹಿಳೆಯ ಮೇಲೆ ಆನೆ ದಾಳಿ ನಡೆಸಿದ್ದು ಮಹಿಳೆಯು ಸಾವನ್ನಪ್ಪಿದ್ದಾರೆ.
ಇನ್ನೋರ್ವ ವ್ಯಕ್ತಿಯ ಮೇಲೂ ಆನೆ ದಾಳಿ ನಡೆಸಿದ್ದು ಅವರು ಕೂಡ ಗಂಭೀರವಾಗಿ ಗಾಯಗೊಂಡು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯನ್ನು 45 ವರ್ಷ ಪ್ರಾಯದ ಸರೋಜಾಬಾಯಿ ಎಂದು ಗುರುತಿಸಲಾಗಿದೆ. ಹಾಗೂ ಗಾಯಗೊಂಡಿರುವ ಇನ್ನೋರ್ವ ವ್ಯಕ್ತಿಯನ್ನು ದುಗ್ಗಪ್ಪ ಎಂದು ಗುರುತಿಸಲಾಗಿದೆ.
ಪ್ರಸ್ತುತ ದುಗ್ಗಪ್ಪ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಆನೆ ದಾಳಿಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು ಮಲೆನಾಡು ಭಾಗದಲ್ಲಿ ಆನೆದಾಳಿಯು ದಿನೇದಿನೇ ಹೆಚ್ಚುತ್ತಿದ್ದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮಕೈಗೊಂಡು ನ್ಯಾಯ ದೊರಕಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.





0 Comments