ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ : ಮೂಡಿಗೆರೆ : ಕಾಡುಕೋಣ ದಾಳಿ ; ಮಹಿಳೆ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ಎರಡು ಕಾರುಗಳ ನಡುವೆ ಭೀಕರವಾಗಿ ಅಪಘಾತ ಸಂಭವಿಸಿದ್ದು ಬಣಕಲ್ ಮೂಲದ ಅಪ್ಸರ್ ಎಂಬ 49 ವರ್ಷ ಪ್ರಾಯದ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ. ಇವರು ಬಣಕಲ್ ಪಟ್ಟಣದಲ್ಲಿ ಎಳನೀರು ಮತ್ತು ಹಣ್ಣುಗಳ ವ್ಯಾಪಾರ ವಹಿವಾಟು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಉಳಿದ ಮೂವರಾದ ಫಯಾಜ್, ಅಜ್ಮಲ್ ಹಾಗೂ ಮೊಹಮ್ಮದ್ ರೂಯೀಸ್ಎಂಬ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಅಪಘಾತ ಹೊಂದಿದ ಕಾರು ಚಿಕ್ಕಮಗಳೂರಿನಿಂದ ಬಣಕಲ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಈ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ.

ತನು ಕೊಟ್ಟಿಗೆಹಾರ, ವರದಿಗಾರರು