ರಾಜ್ಯ : (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುತ್ತಿದ್ದು ಇಂದೂ ಕೂಡ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇದನ್ನೂ ಓದಿ : ಮುಖ್ಯಮಂತ್ರಿಗಳ ಪದಕ ಗೌರವಕ್ಕೆ ಭಾಜನರಾದ ಚಿಕ್ಕಮಗಳೂರಿನ ಪ್ರಭು ಸಿ.ಎಸ್
ಕರ್ನಾಟಕದ ಕರಾವಳಿ ಮತ್ತು ಪಶ್ಚಿಮ ಭಾಗಗಳಲ್ಲಿ ಇಂದು ಮಳೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದು ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು ಭಾಗಗಳಾದ ಶಿವಮೊಗ್ಗ ಹಾಸನ ಕೊಡಗು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಾಳಿಸಹಿತ ಮಳೆಯಾಗುವ ಸಾಧ್ಯತೆಗಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ಅಲ್ಲಲ್ಲಿ ಕೆಲ ಅವಘಡಗಳು ಸಂಭವಿಸಿದ್ದು ಮಳೆಯ ಮುನ್ಸೂಚನೆ ಇರುವ ಪ್ರದೇಶಗಳಲ್ಲಿ ಜನರು ಎಚ್ಚರಿಕೆಯಿಂದ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.





0 Comments