ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಉರುಳಿದ ದುರ್ಘಟನೆ ಚಾರ್ಮಾಡಿ ಘಾಟ್ ಮೊದಲನೆ ತಿರುವಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನ ಮೊದಲನೇ ತಿರುವಿನಲ್ಲಿ ಈ ಘಟನೆ ನಡೆದಿದ್ದು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಉರುಳಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. 

ಈ ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಾಗೂ ಚಾರ್ಮಾಡಿ ಹಸನಬ್ಬ ಅವರ ತಂಡ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಸ್ತುತ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಚಿಕ್ಕಮಗಳೂರು ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಕೊಂಡಿಯಾಗಿರುವ ಚಾರ್ಮಾಡಿಘಾಟ್ ಕಿರಿದಾದ ತಿರುವುಗಳನ್ನು ಹೊಂದಿದ್ದು ಸ್ವಲ್ಪ ಆಯತಪ್ಪಿದರು ಕೂಡ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ಮಾರ್ಗದಲ್ಲಿ ಸಂಚಾರ ಮಾಡುವ ಪ್ರಯಾಣಿಕರು ಹಾಗೂ ವಾಹನ ಸವಾರರು ಹೆಚ್ಚಿನ ಗಮನವನ್ನು ರಸ್ತೆಯಮೇಲಿರಿಸಿ ಈ ಮಾರ್ಗದಲ್ಲಿ ಸಂಚಾರ ಮಾಡಬೇಕು.

ತನು ಕೊಟ್ಟಿಗೆಹಾರ, ವರದಿಗಾರರು