ಆಲ್ದೂರು : (ನ್ಯೂಸ್ ಮಲ್ನಾಡ್ ವರದಿ) ಆಲ್ದೂರು ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಚಿಕ್ಕಮಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ ; ಬೀಗ ಮುರಿದು ಮನೆ ಕಳ್ಳತನ ನಡೆಸುತ್ತಿದ್ದ ಚಾಲಾಕಿ ಕಳ್ಳ ಅಂದರ್

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೊಸಳ್ಳಿಯ ವಿಜಯ್ ಕುಮಾರ್ ನೇಣಿಗೆ ಶರಣಾದ ವ್ಯಕ್ತಿ. ಮೃತರು ಪಟ್ಟಣದಲ್ಲಿ ಎಲೆಕ್ಟ್ರಿಕಲ್ ಅಂಗಡಿಯನ್ನು ನಡೆಸುತ್ತಿದ್ದರು. ಎಂದಿನಂತೆ ನಿನ್ನೆ ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದವರು ಪತ್ನಿಯ ಬಳಿ ಊಟಕ್ಕೆ ರೆಡಿ ಮಾಡುವಂತೆ ತಿಳಿಸಿ ಬಚ್ಚಲು ಮನೆಗೆ  ಹೋಗಿ ಅನೇಕ ಸಮಯ ಕಳೆದರೂ  ಹೊರಬಾರದೇ ಇದ್ದಾಗ ಪತ್ನಿ ಬಾತ್ ರೂಮ್ ಬಾಗಿಲನ್ನು ತೆರೆದು ನೋಡಿದ್ದಾರೆ ಈ ಸಂದರ್ಭದಲ್ಲಿ ಪತಿ ನೇಣಿಗೆ ಶರಣಾಗಿರುವುದು ಕಂಡು ಬಂದಿದೆ.

ನಂತರದಲ್ಲಿ ಆಲ್ದೂರು ಪೊಲೀಸ್ ಠಾಣೆಗೆ ದೂರು ನೀಡಿ ಮೃತ ವಿಜಯ್ ಕುಮಾರ್ ಅವರ ಮೃತದೇಹವನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಮೃತರು ಪತ್ನಿ ಹಾಗೂ ಓರ್ವ ಮಗನನ್ನು ಅಗಲಿದ್ದಾರೆ. ಇವರ ಸಾವಿಗೆ ನಿಖರ ಕಾರಣಗಳೇನು ಎಂದು ಇನ್ನಷ್ಟೇ ತಿಳಿಯಬೇಕಿದೆ. ಇವರ ಸಾವಿನ ಕುರಿತು ಸ್ಥಳೀಯರು ಹಾಗೂ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಅನೇಕರು ಮೃತರ ಮನೆಗೆ ತೆರಳಿ ಪತ್ನಿ ಹಾಗೂ ಕುಟುಂಬಸ್ಥರಿಗೆ ಸಾಂತ್ವಾನ ಹೇಳುತ್ತಿದ್ದಾರೆ. ಘಟನೆಯ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದಾರೆ.