ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಕಛೇರಿಯ ಟೆಕ್ನಿಕಲ್ ಸೆಲ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಭು ಎಸ್.ಸಿ ಅವರು ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ.
ಇದನ್ನೂ ಓದಿ : ರಕ್ತದಿಂದ ಪತ್ರ ಬರೆದು ಸಮರ್ಪಕ ಪರಿಹಾರಕ್ಕಾಗಿ ಆಗ್ರಹಿಸಿದ ರೈತರು
ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಪೊಲೀಸ್ ಕಛೇರಿಯ ಟಿಕ್ನಿಕಲ್ ಸೆಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಭು ಎಸ್.ಸಿ, ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಅವರು 2021 ನೆಯ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ.
ಪದಕಕ್ಕೆ ಭಾಜನರಾಗಿರುವ ಅವರನ್ನು ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಅಭಿನಂದಿಸಿದ್ದಾರೆ.
ನಿಷ್ಠೆ ಹಾಗೂ ಪರಿಶ್ರಮದ ಮೂಲಕ ಕಾರ್ಯ ನಿರ್ವಹಣೆ ಮಾಡಿದಲ್ಲಿ ಈ ರೀತಿಯ ಪ್ರಶಸ್ತಿಗಳಿಗೆ ಭಾಜನರಾಗಬಹುದು. ಎಲ್ಲರೂ ಅವರವರ ಕರ್ತವ್ಯಗಳನ್ನು ಉತ್ತಮವಾಗಿ ನಿಭಾಯಿಸಬೇಕು, ಮುಖ್ಯಮಂತ್ರಿಗಳ ಪದಕ ಗೌರವಕ್ಕೆ ಪಾತ್ರರಾಗಿರುವ ಪ್ರಭು ಅವರಿಗೆ ಇನ್ನೂ ಹೆಚ್ಚಿನ ಪ್ರಶಸ್ತಿ ಹಾಗೂ ಗೌರವ ಲಭಿಸಲಿ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ಹಾರೈಸಿದ್ದಾರೆ.





0 Comments