ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನ ದತ್ತಪೀಠದ ಬಳಿಯಲ್ಲಿ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಅನೇಕರು ಗಾಯಗೊಂಡ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ನಿಸರ್ಗ ಸೌಂದರ್ಯದ ಮಡಿಲಿನಲ್ಲಿರುವ ದತ್ತಪೀಠದ ಶ್ರೀ ಗುರು ದತ್ತಾತ್ರೇಯ ಪೀಠಕ್ಕೆ ತೆರಳುವ ಮಾರ್ಗವಾದ ಅತ್ತಿಗುಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಎಸ್.ಎಂ.ಎಸ್ ಬಸ್ ಪಲ್ಟಿಯಾಗಿದ್ದು ಅವಘಡದಲ್ಲಿ ಅನೇಕರು ಗಾಯಗೊಂಡಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸ್ಥಳೀಯರು ಧಾವಿಸಿದ್ದು ಬಸ್ಸಿನಲ್ಲಿದ್ದವರನ್ನು ಮೇಲಕ್ಕೆತ್ತುವ ರಕ್ಷಣಾ ಕಾರ್ಯವನ್ನು ನಡೆಸಿದರು. ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಹ ಸ್ಥಳಕ್ಕೆ ತೆರಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ: ಈ ದುರಂತದಲ್ಲಿ 10ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹಂಚುತ್ತಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.





0 Comments