ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಇದನ್ನೂ ಓದಿ : ಶೃಂಗೇರಿ : ಜಗದ್ಗುರುಗಳ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡ ಶ್ರೀ ಮಲಹಾನಿಕರೇಶ್ವರ ರಥೋತ್ಸವ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಬಾಡಿಗೆ ವಾಹನ ಮಾಡಿಕೊಂಡು ಕೊಪ್ಪಳ ಜಿಲ್ಲೆಯ ಕುಟುಂಬವೊಂದರ ಸದಸ್ಯರು ತೆರಳುತ್ತಿದ್ದರು ಈ ವೇಳೆ ಒಕ್ಕೂಡಿ ಗ್ರಾಮದ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಉರುಳಿದ್ದು ಅಂದಾಜು 30 ಅಡಿಗಳಷ್ಟು ಕೆಳಗೆ ಬಿದ್ದಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ವಾಹನವನ್ನು ಹಾಗೂ ಅದರಲ್ಲಿದ್ದವರನ್ನು ಮೇಲಕ್ಕೆತ್ತಲು ಹರಸಾಹಸ ಪಟ್ಟಿದ್ದಾರೆ. ಆದರೆ ಗೌರಮ್ಮ ಎಂಬ ಮಹಿಳೆ ಗಾಯಗೊಂಡಿದ್ದು ಸಾವನ್ನಪ್ಪಿದ್ದಾರೆ. 

ಈ ಕುರಿತು ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಈ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.