ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಕೆಲ ದಿನಗಳ ಹಿಂದಷ್ಟೇ ರಾಜ್ಯಾದ್ಯಂತ ಆರಂಭವಾದ ಮುಸಲ್ಮಾನರೊಂದಿಗಿನ ವ್ಯಾಪಾರ ವಹಿವಾಟುಗಳ ನಿಷೇಧದ ಕುರಿತಾಗಿ ಮಲೆನಾಡಿನಲ್ಲೂ ಅಭಿಯಾನ ಆರಂಭವಾಗಿದೆ, ರಾಜ್ಯದಲ್ಲಿ ಮುಸಲ್ಮಾನರು ಹಿಜಾಬ್ ತೀರ್ಪನ್ನು ವಿರೋಧಿಸಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸಂವಿಧಾನವನ್ನು ವಿರೋಧಿಸಿದ್ದಾರೆ ಈ ನಿಟ್ಟಿನಲ್ಲಿ ಹಿಂದೂ ಸಂಪ್ರದಾಯ ಆಚರಣೆಯಂತೆ ನಡೆಯುವ ಜಾತ್ರೆಯಲ್ಲಿ ಅಂಗಡಿ ಮಳಿಗೆಗೆ ಅವಕಾಶ ನೀಡಬಾರದೆಂದು ಸ್ಥಳೀಯರು ಗ್ರಾಮ ಪಂಚಾಯಿತಿಯನ್ನು ಕೋರಿದ್ದಾರೆ. 

ಇದನ್ನೂ ಓದಿ : ಶೃಂಗೇರಿ : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಮಾಡಿದ್ದ ಬೇಲಿಯನ್ನು ತೆರವುಗೊಳಿಸಿದ ಗ್ರಾಮ ಪಂಚಾಯತ್ ಅಧಿಕಾರಿಗಳು

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿರುವ ಸಾರ್ವಜನಿಕರು ಮುಂದಿನ ಕೆಲ ದಿನದಲ್ಲಿ ನಡೆಯುವ ಚಿತ್ರವಳ್ಳಿ ಶ್ರೀ ವನದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಹಿಂದೂಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಿಂದ ಆಗಮಿಸುವ ಅನ್ಯಧರ್ಮೀಯರಿಗೆ ಅಂಗಡಿ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಬಾರದು ಎಂದು ಮನವಿ ಸಲ್ಲಿಸಿದ್ದಾರೆ. ಧಾರ್ಮಿಕ ದತ್ತಿ ಕಾಯ್ದೆ 2002ರ ಅಡಿಯಲ್ಲಿ ಸರ್ಕಾರದ ಅಧೀನದಲ್ಲಿ ಬರುವ ದೇವಾಲಯಗಳ ಸುತ್ತಮುತ್ತಲಿನ ಕಟ್ಟಡಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಇರುವುದಿಲ್ಲ. ಅದರಂತೆಯೇ ದೇವಸ್ಥಾನದ ಪಾವಿತ್ರ್ಯತೆಯ ದೃಷ್ಟಿಯಿಂದ ಇತರೆ ದೇವಸ್ಥಾನಗಳು ಸಹ ಈ ನಿಯಮವನ್ನು ಜಾರಿಗೆ ತರಬೇಕು.

ಈ ಜಾತ್ರೆಯಲ್ಲಿ ಹಿಂದೂ ಕುಟುಂಬಗಳು ಹರಿಕೆ ಕಾಣಿಕೆ ರೂಪದಲ್ಲಿ ಸೇವೆಸಲ್ಲಿಸುತ್ತಾ ಸಹಕಾರ ನೀಡುತ್ತಾರೆ, ಆದರೆ ಬೇರೆಡೆಗಳಿಂದ ಆಗಮಿಸುವ ಅನ್ಯಮತೀಯರು ಕಳ್ಳತನ ಸೇರಿದಂತೆ ಇನ್ನಿತರ ದುಷ್ಕೃತ್ಯಗಳಲ್ಲಿ ಭಾಗಿಯಾಗಿ ಕೆಡುಕುಂಟು ಮಾಡುತ್ತಾರೆ ಈ ಕಾರಣಕ್ಕಾಗಿ ಅವರಿಗೆ ಅವಕಾಶ ನೀಡಬಾರದು ಎಂದು ಅಡ್ಡಗದ್ದೆ ಸ್ಥಳೀಯರು ದೂರಿದ್ದಾರೆ.

ಮೊನ್ನೆಯಷ್ಟೇ ಹೈಕೋರ್ಟ್ ನೀಡಿದ ಹಿಜಾಬ್ ಕುರಿತಾದ ತೀರ್ಪನ್ನು ವಿರೋಧಿಸಿ ಸಂವಿಧಾನ ವಿರೋಧಿ ಚಟುವಟಿಕೆ ನಡೆಸಿರುತ್ತಾರೆ ಹಾಗೂ ಈ ನೆಲದ ಕಾನೂನನ್ನು ವಿರೋಧಿಸಿರುತ್ತಾರೆ ಆದ ಕಾರಣ ಯಾವುದೇ ಕಾರಣಕ್ಕೂ ಅನ್ಯಮತೀಯರಿಗೆ ಚಿತ್ರವಳ್ಳಿ ಜಾತ್ರೆಯಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಬಾರದೆಂದು ಸ್ಥಳೀಯರು ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಹಾಗೂ ಪಿಡಿಓ ಅವರನ್ನು ಕೋರಿದ್ದಾರೆ. ಮನವಿ ನೀಡುವ ಸಂದರ್ಭದಲ್ಲಿ ಅಡ್ಡಗದ್ದೆ ವ್ಯಾಪ್ತಿಯ ಸ್ಥಳೀಯರು ಹಾಜರಿದ್ದರು.