ತೀರ್ಥಹಳ್ಳಿ : (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಗುಂಡು ತಗುಲಿ ಬಿಜೆಪಿ ಮುಖಂಡ ಕಾಂತರಾಜು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರು : ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಯ ಜನತಾ ಪಕ್ಷದ ಮುಖಂಡ ಕಾಂತರಾಜು ಅಂಬುತೀರ್ಥ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಶಿಕಾರಿಗೆ ತೆರಳಿದ ಸಂದರ್ಭದಲ್ಲಿ ಗುಂಡು ತಗುಲಿ ಸಾವನ್ನಪ್ಪಿದ್ದಾರೆ.
ನೋವಿನಿಂದ ನರಳುತ್ತಿದ್ದ ಅವರನ್ನು ಕಾರಿನಲ್ಲಿ ಹೋಗುತ್ತಿದ್ದವರು ಗಮನಿಸಿ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲು ಮಾಡಲು ತಯಾರಿ ನಡೆಸಿದ್ದಾರೆ. ಆದರೆ ಮಾರ್ಗ ಮಧ್ಯೆ ಕಾಂತರಾಜು ಕೊನೆ ಉಸಿರೆಳೆದಿದ್ದಾರೆ. ಈ ಕುರಿತು ತೀರ್ಥಹಳ್ಳಿ ಸಾರ್ವಜನಿಕರಲ್ಲಿ ಚರ್ಚೆ ಹೆಚ್ಚಿದ್ದು ಯಾರಾದರೂ ದುರುದ್ದೇಶ ಹೊಂದಿ ಗುಂಡು ಹೊಡೆದಿದ್ದಾರೋ ಅಥವಾ ಅವರ ಬಂದೂಕಿನ ಗುಂಡು ಆಕಸ್ಮಿಕವಾಗಿ ತಗುಲಿತೆ ಎಂಬ ವಿಷಯದ ಕುರಿತಾಗಿ ಹೆಚ್ಚಿನ ಚರ್ಚೆ ನಡೆಯುತ್ತಿದೆ.
ಪೊಲೀಸರ ಸಂಪೂರ್ಣ ತನಿಖೆಯ ನಂತರವಷ್ಟೇ ಈ ಕುರಿತು ಹೆಚ್ಚಿನ ಮಾಹಿತಿ ಲಭಿಸಬೇಕಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಗೃಹಸಚಿವ ಆರಗ ಜ್ಞಾನೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಕುರಿತಾಗಿ ಮಾಹಿತಿ ಪಡೆದು ಸೂಕ್ತ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಈ ಘಟನೆಯ ಕುರಿತಾದ ಕೂಲಂಕುಶ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.





0 Comments